ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನಲ್ಲಿ ಅಂತರ್‌ರಾಷ್ಟ್ರೀಯ ಮಹಿಳಾ ದಿನಾಚರಣೆ

0

ಕೆ.ವಿ.ಜಿ. ತಾಂತ್ರಿಕ ಮಹಾವಿದ್ಯಾಲಯದಲ್ಲಿ ಅಂತರ್‌ರಾಷ್ಟ್ರೀಯ ದಿನಾಚರಣೆಯನ್ನು ೧೧ ರಂದು ಸಿ.ಐ.ಸಿ.ಸಿ. ವತಿಯಿಂದ ಕಾಲೇಜಿನ ಸಭಾಂಗಣದಲ್ಲಿ ನಡೆಸಲಾಯಿತು. ಮುಖ್ಯ ಅತಿಥಿಗಳಾಗಿ ಶ್ರೀಮತಿ ನೇತ್ರಾವತಿ ಪಡ್ಡಂಬೈಲು ವಹಿಸಿದ್ದರು.

ಇದೇ ಸಂದರ್ಭದಲ್ಲಿ ಮಾತನಾಡಿದ ಇವರು ಭಾರತೀಯ ಮಹಿಳೆ ಸಹೃದಯಿ. ತಾಯ್ತನ ಎನ್ನುವುದು ಮಹಿಳೆಗೆ ಪ್ರಕೃತಿ ನೀಡಿದ ಅಭೂತಪೂರ್ವ ಕೊಡುಗೆ. ಇಂದು ಶಿಕ್ಷಣ ಕ್ಷೇತ್ರದಲ್ಲಿ ಪ್ರಬುದ್ಧರಾಗಿ ವಿಜ್ಞಾನ ಹಾಗೂ ತಂತ್ರಜ್ಞಾನ ಕ್ಷೇತ್ರದಲ್ಲಿ ವಿಶೇಷ ಮೈಲುಗಲ್ಲು ಸ್ಥಾಪಿಸಿದ್ದಾರೆ ಎಂದು ಹೇಳಿ ಮಹಿಳಾ ದಿನಾಚರಣೆಯ ಶುಭಾಶಯಗಳನ್ನು ಕೋರಿದರು.

ಇನ್ನೋರ್ವ ಅತಿಥಿ ಡಾ. ಯಶೋದಾ ರಾಮಚಂದ್ರ, ಪ್ರಾಂಶುಪಾಲರು, ಕೆ.ವಿ.ಜಿ. ಅಮರಜ್ಯೋತಿ ಪಿ.ಯು ಕಾಲೇಜು ಸನ್ಮಾನಿತರ ನೆಲೆಯಲ್ಲಿ ಮಾತನಾಡಿದ ಇವರು ಮಹಿಳೆ ಗೃಹಿಣಿಯಾಗಿ, ಕೌಟುಂಬಿಕ ಜವಾಬ್ದಾರಿ ನಿರ್ವಹಿಸುವುದರೊಂದಿಗೆ ಸಮಾಜದಲ್ಲಿಯೂ ಪುರುಷರಂತೆಯೇ ಸ್ವಾವಾಲಂಬಿಗಳಾಗಿ ಗುರುತಿಸಿಕೊಳ್ಳುತ್ತಿದ್ದಾರೆ. ಇದು ದೇಶದ ಒಳಿತಿಗೆ ಕಾರಣವಾಗಿದೆ ಎಂದು ಹೇಳಿ ನೆರೆದಿದ್ದ ಎಲ್ಲರಿಗೂ ಮಹಿಳಾ ದಿನಾಚರಣೆಯ ಶುಭಾಶಯ ಕೋರಿದರು.

ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮತ್ತು ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥ ಡಾ. ಉಜ್ವಲ್ ಯು.ಜೆ. ಯವರು ಮಾತನಾಡಿ ಹೆಣ್ಣು ಒಂದು ಪೂರಕ ಶಕ್ತಿ. ಇಂದು ಮಹಿಳೆಯರು ಸಮಾಜದ ಎಲ್ಲಾ ಕ್ಷೇತ್ರಗಳಲ್ಲಿ ಗುರುತಿಸಿಕೊಂಡು ಸಮಾಜದ ಒಳಿತಿಗಾಗಿ ದುಡಿಯುತ್ತಿರುವುದು ಒಂದು ಹೆಮ್ಮೆಯ ವಿಚಾರ. ಹೆಣ್ಣು ಅವಮಾನಗಳನ್ನು ಸದೆಬಡಿದು ಧೈರ್ಯ, ಆತ್ಮಸ್ಥೈರ್ಯವನ್ನು ಮೈಗೂಡಿಸಿಕೊಂಡು ಬಾಳಬೇಕು ಎಂದು ಮಹಿಳಾದಿನಾಚರಣೆಯ ಶುಭಾಶಯಗಳನ್ನು ಕೋರಿದರು. ಇದೇ ಕಾರ್ಯಕ್ರಮದಲ್ಲಿ ನೇತ್ರಾವತಿ ಪಡ್ಡಂಬೈಲು, ಡಾ. ಯಶೋದಾ ರಾಮಚಂದ್ರ ಮತ್ತು ಶ್ರೀಮತಿ ಕಮಲಾ ಮುತ್ತುರಾಜ್, ಕೆ.ವಿ.ಜಿ. ಪಾಲಿಟೆಕ್ನಿಕ್, ಸುಳ್ಯ ಅವರನ್ನು ಕಾಲೇಜಿನ ವತಿಯಿಂದ ಸನ್ಮಾನಿಸಲಾಯಿತು. ಇದೇ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಸುರೇಶ ವಿ.ಯವರು ನೆರೆದಿದ್ದ ಎಲ್ಲರಿಗೂ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಶುಭಾಶಯಗಳನ್ನು ಕೋರಿದರು.

ಅತಿಥಿಗಳನ್ನು ಹಾಗೂ ಸಭಾ ಸದರನ್ನು ಕೆಮಿಸ್ಟ್ರಿ ವಿಭಾಗದ ಮುಖ್ಯಸ್ಥೆ ಡಾ. ಸುರೇಖಾ ಎಂ. ಸ್ವಾಗತಿಸಿ, ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್ ವಿಭಾಗದ ಪ್ರೊ. ದಿವ್ಯ ಎ.ಕೆ. ಧನ್ಯವಾದ ಸಮರ್ಪಿಸಿದರು, ವಿದ್ಯಾರ್ಥಿನಿ ಹ್ರೃತೀಕ್ಷ ಕಾರ್ಯಕ್ರಮ ನಿರೂಪಿಸಿ, ವಿದ್ಯಾರ್ಥಿನಿ ಅನನ್ಯ ಹೆಬ್ಬಾರ್ ಮತ್ತು ತಂಡ ಪ್ರಾರ್ಥಿಸಿದರು. ಸಭಾ ಕಾರ್ಯಕ್ರಮದ ಬಳಿಕ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಯಿತು. ಕಾರ್ಯಕ್ರಮದಲ್ಲಿ ಬೋಧಕ, ಬೋಧಕೇತರ ಸಿಬ್ಬಂದಿ ವರ್ಗದವರು ಮತ್ತು ವಿದ್ಯಾರ್ಥಿನಿಯರು ಉಪಸ್ಥಿಸಿತರಿದ್ದರು.