ಕೆ ವಿ ಜಿ ಪಾಲಿಟೆಕ್ನಿಕ್: ಆಟೋಮೊಬೈಲ್ ಇಂಜಿನಿಯರಿಂಗ್ ಅಸೋಸಿಯೇಷನ್ ವಾರ್ಷಿಕ ಚಟುವಟಿಕೆಗಳಿಗೆ ಚಾಲನೆ

0

ಸುಳ್ಯದ ಕುರಂಜಿ ವೆಂಕಟರಮಣಗೌಡ ಪಾಲಿಟೆಕ್ನಿಕ್ ನ ಆಟೋಮೊಬೈಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳ ಸಂಘ ಆಟೋಮೊಬೈಲ್ ಇಂಜಿನಿಯರಿಂಗ್ ಅಸೋಸಿಯೇಷನ್ ನ 2023- 24 ನೇ ಸಾಲಿನ ಚಟುವಟಿಕೆಗಳಿಗೆ ಚಾಲನೆ ನೀಡಲಾಯಿತು

. ಕಾಲೇಜಿನ ಪ್ರಾಂಶುಪಾಲ ಶ್ರೀಧರ್ ಎಂ ಕೆ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಆಟೋಮೊಬೈಲ್ ವಿಭಾಗದ ಮುಖ್ಯಸ್ಥ ಚಂದ್ರಶೇಖರ ಎಂ ಎನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸಮಾರಂಭದ ವೇದಿಕೆಯಲ್ಲಿ ಕಾಲೇಜಿನ ಉಪ ಪ್ರಾಂಶುಪಾಲ ಅಣ್ಣಯ್ಯ ಕೆ ಆಂತರಿಕ ಗುಣಮಟ್ಟ ಖಾತರಿ ಕೋಶದ ಸಂಚಾಲಕ ವಿವೇಕ್ ಪಿ, ವಿದ್ಯಾರ್ಥಿ ಆಪ್ತ ಸಮಾಲೋಚಕ ರಂಗಸ್ವಾಮಿ ಹಾಗೂ ಆಟೋಮೊಬೈಲ್ ಅಸೋಸಿಯೇಷನ್ ಸಲಹೆಗಾರ ಚಂದ್ರಶೇಖರ ಬಿಳಿನೆಲೆ ಉಪಸ್ಥಿತರಿದ್ದರು. ಸಂಘದ ಅಧ್ಯಕ್ಷ ಭರತ್ ಸ್ವಾಗತಿಸಿ ಕಾರ್ಯದರ್ಶಿ ಯತಿನ್ ವಂದಿಸಿದರು. ಕರುಣ್ ಕಾರ್ಯಕ್ರಮ ನಿರೂಪಿಸಿದರು.