ಕಳಪೆ ಕಾಮಗಾರಿ ಆರೋಪಿಸಿ ಜಿ.ಪಂ. ಇಂಜಿನಿಯರ್ ಅವರನ್ನು ತೀವ್ರ ತರಾಟೆಗೆತ್ತಿಕೊಂಡ ಗ್ರಾಮಸ್ಥರು
ಜಾಲ್ಸೂರು ಗ್ರಾಮ ಪಂಚಾಯತಿಯ 2023-24,ನೇ ಸಾಲಿನ ಪ್ರಥಮ ಹಂತದ ಗ್ರಾಮಸಭೆಯು ಗ್ರಾಮ ಪಂಚಾಯತಿ ಸಭಾಭವನದಲ್ಲಿ ಮಾ.13ರಂದು ಜರುಗಿತು.
ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ತಿರುಮಲೇಶ್ವರಿ ಮರಸಂಕ ಅವರು ಅಧ್ಯಕ್ಷತೆ ವಹಿಸಿದ್ದರು. ಸಾರ್ವಜನಿಕ ಶಿಕ್ಷಣ ಇಲಾಖೆಯ ದೈಹಿಕ ಪರಿವೀಕ್ಷಕರು ನೋಡೆಲ್ ಅಧಿಕಾರಿಯಾಗಿ ಉಪಸ್ಥಿತರಿದ್ದರು.
ಜಿ.ಪಂ. ಇಲಾಖೆಯ ವತಿಯಿಂದ ಗ್ರಾಮದಲ್ಲಿ ನಡೆದ ಕಾಮಗಾರಿ ಕಳಪೆಯಾಗಿದೆ ಎಂದು ಅರೋಪಿಸಿ, ಜಿ.ಪಂ. ಇಂಜಿನಿಯರ್ ಜನಾರ್ದನ ಅವರನ್ನು ಗ್ರಾಮಸ್ಥರು ತೀವ್ರವಾಗಿ ತರಾಟೆಗೆತ್ತಿಕೊಂಡ ಘಟನೆ ನಡೆಯಿತು.
ಜೊತೆಗೆ 110 ಕೆ.ವಿ. ವಿದ್ಯುತ್ ಲೈನ್ ಹಾದು ಹೋಗುವ ಸಮಯದಲ್ಲಿ ಕೃಷಿಕರಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಿ ಎಂದು ಗ್ರಾಮಸ್ಥರು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಉಪಾಧ್ಯಕ್ಷೆ ಶ್ರೀಮತಿ ತಿರುಮಲೇಶ್ವರಿ ಅರ್ಭಡ್ಕ, ಸದಸ್ಯರುಗಳಾದ ಕೆ.ಎಂ. ಬಾಬು ಕದಿಕಡ್ಕ, ಅಬ್ದುಲ್ ಮಜೀದ್ ನಡುವಡ್ಕ, ಪಿ.ಆರ್. ಸಂದೀಪ್ ಕದಿಕಡ್ಕ, ಶ್ರೀಮತಿ ಸಾವಿತ್ರಿ ಅಡ್ಕಾರುಬೈಲು, ಶ್ರೀಮತಿ ಸಂಧ್ಯಾವಾಗ್ಲೆ ಅಡ್ಕಾರು, ವಿಜಯ ಅಡ್ಕಾರು, ಶ್ರೀಮತಿ ಗೀತಾ ಗೋಪಿನಾಥ್ ಬೊಳುಬೈಲು, ಶ್ರೀಮತಿ ಲೀಲಾವತಿ ವಿನೋಬನಗರ, ಶ್ರೀಮತಿ ಅಂಬಿಕಾ ಕುಕ್ಕಂದೂರು, ಶ್ರೀಮತಿ ದೀಪ ಅಜಕಳಮೂಲೆ, ಶ್ರೀಮತಿ ಗೀತಾ ಚಂದ್ರಹಾಸ ಅರ್ಭಡ್ಕ, ಶಿವಪ್ರಸಾದ್ ಕುಕ್ಕಂದೂರು ಸೇರಿದಂತೆ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು. ಗ್ರಾ.ಪಂ. ಪ್ರಭಾರ ಅಭಿವೃದ್ಧಿ ಅಧಿಕಾರಿ ಚೆನ್ನಪ್ಪ ನಾಯ್ಕ ಅವರು ಸ್ವಾಗತಿಸಿದರು.