ಬೆಂಗಳೂರು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಅಕಾಡೆಮಿಕ್ ಕೌನ್ಸಿಲ್ ಸದಸ್ಯರಾಗಿ ಡಾ. ಲೀಲಾಧರ್ ಡಿ.ವಿ ನೇಮಕ

0

ಬೆಂಗಳೂರು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಅಕಾಡೆಮಿಕ್ ಕೌನ್ಸಿಲ್ ಸದಸ್ಯರಾಗಿ ಕೆ.ವಿ.ಜಿ. ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಪ್ರಾಂಶುಪಾಲರಾದ ಡಾ. ಲೀಲಾಧರ್ ಡಿ.ವಿ ನೇಮಕಗೊಂಡಿದ್ದಾರೆ.
1996ರಿಂದ 2001ರ ತನಕ ಸುಳ್ಯದ ಕೆ.ವಿ.ಜಿ. ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಬಿ.ಎ.ಎಂ.ಎಸ್ ಪೂರೈಸಿ, 2005ರಲ್ಲಿ ಸ್ನಾತಕೋತ್ತರ ಪದವಿ ಪಡೆದರು. ಬಳಿಕ ಕೆ.ವಿ.ಜಿ. ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಮತ್ತು ಕಾರ್ಯನಿರ್ವಹಣಾಧಿಕಾರಿಯಾಗಿ ನೇಮಕಗೊಂಡರು. 2010ರಿಂದ ಕಾಲೇಜಿನ ಆಡಳಿತಾಧಿಕಾರಿಯಾಗಿ ಮತ್ತು ಅಸೋಸಿಯೇಟ್ ಪ್ರೊಫೆಸರ್ ಆಗಿ, 2015ರಿಂದ ಪ್ರೋಫೆಸರ್ ಮತ್ತು ಅಗದತಂತ್ರ ವಿಭಾಗ ಮುಖ್ಯಸ್ಥರಾಗಿ ಪದೋನ್ನತಿ‌ ಪಡೆದರು. 2021ರಲ್ಲಿ ಕಾಲೇಜಿನ ಪ್ರಾಂಶುಪಾಲರಾಗಿ ಅಧಿಕಾರ ವಹಿಸಿಕೊಂಡರು. ಇದರೊಂದಿಗೆ ಕಾಲೇಜಿನ ಮೆಡಿಕಲ್ ಸೂಪರಿಂಟೆಂಡೆಂಟ್ ಆಗಿಯೂ ನೇಮಕಗೊಂಡರು. ಗೂನಡ್ಕದ ದೋಳಮನೆ ವೀರಪ್ಪ ಗೌಡ ಮತ್ತು ಶ್ರೀಮತಿ ಗೌರಮ್ಮ ದಂಪತಿಯ ಸುಪತ್ರರಾದ ಡಾ. ಡಿ.ವಿ. ಲೀಲಾಧರ್ ರವರ ಪತ್ನಿ‌ ಡಾ. ಜಯವಾಣಿ ಕೆ.ವಿ.ಜಿ. ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಯೋಗ ವಿಭಾಗದಲ್ಲಿ ಪ್ರೊಫೆಸರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಸಹೋದರ ಸತೀಶ್ ಡಿ.ವಿ. ಯವರು ಶಿವಮೊಗ್ಗದಲ್ಲಿ ಪ್ರತಿಷ್ಠಿತ ಸೋನಿ ಕಂಪನಿಯ ಸರ್ವಿಸ್ ಪ್ರಾಂಚೈಸ್ ಹೊಂದಿದ್ದಾರೆ ಮತ್ತು ಶಿವಮೊಗ್ಗದ ಶ್ರೀ ಆದಿಚುಂಚನಗಿರಿ ಶಿಕ್ಷಣ ಸಂಸ್ಥೆಗಳ ನಿರ್ದೇಶಕರಾಗಿದ್ದಾರೆ.