ಬೆಳ್ಳಾರೆ : ಮಹಿಳಾ ದಿನಾಚರಣೆಯ ಅಂಗವಾಗಿ ಮಾಹಿತಿ ಕಾರ್ಯಕ್ರಮ

0

ಸ್ನೇಹಶ್ರೀ ಮಹಿಳಾ ಮಂಡಲ ಬೆಳ್ಳಾರೆ ಆಶ್ರಯದಲ್ಲಿ ಮಹಿಳಾ ದಿನಾಚರಣೆಯ ಅಂಗವಾಗಿ ಮಾಹಿತಿ ಕಾರ್ಯಕ್ರಮವು ಮಾ.16 ರಂದು ಬೆಳ್ಳಾರೆ ಸ್ನೇಹಿತರ ಕಲಾ ಸಂಘದ ಸಭಾಂಗಣ ‘ ಸ್ನೇಹ ಸದನ ದಲ್ಲಿ ಜರುಗಿತು.

ಮಹಿಳಾ ಮಂಡಲದ ಅಧ್ಯಕ್ಷರಾದ ಶ್ರೀಮತಿ ಸುಜಾತ ಜನಾರ್ಧನ ಚೀಮುಳ್ಳು ಇವರ ಅಧ್ಯಕ್ಷತೆಯಲ್ಲಿ ಜರುಗಿತು, ಬೆಳ್ಳಾರೆ ಗ್ರಾಮ ಪಂಚಾಯತು ಕಾರ್ಯದರ್ಶಿ ತಿರುಮಲೇಶ್ವರ ಕೆ ಉದ್ಘಾಟಿಸಿ ಶುಭಹಾರೈಸಿದರು, ಸಂಪನ್ಮೂಲ ವ್ಯಕ್ತಿಯಾಗಿ ಚೈಲ್ಡ್ ರೈಟ್ಸ್ ಟ್ರಸ್ಟ್ ಸುಳ್ಯದ ತಾಲೂಕು ಸಂಯೋಜಕಿ ಶ್ರೀಮತಿ ಅಮೃತ ರೈ.ಪಿ ಇವರು ಮಹಿಳೆ ಮತ್ತು ಮಕ್ಕಳ ಹಕ್ಕುಗಳು ಎಂಬ ವಿಷಯದ ಬಗ್ಗೆ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಬೆಳ್ಳಾರೆ ಪ್ರಾಥಮಿಕ ಆರೋಗ್ಯ ಕೇಂದ್ರ ದ ಕಿರಿಯ ಆರೋಗ್ಯ ಸುರಕ್ಷಾಧಿಕಾರಿಗಳಾದ ಶ್ರೀಮತಿ ವಸಂತಿ ಇವರನ್ನು ಅತ್ಯುತ್ತಮ ಸೇವೆಗಾಗಿ ಗೌರವಿಸಲಾಯಿತು.

ಮಹಿಳಾ ದಿನಾಚರಣೆಯ ಅಂಗವಾಗಿ ಮಹಿಳಾ ಮಂಡಲದ ಸದಸ್ಯರಿಗೆ ಏರ್ಪಡಿಸಿದ ವಿವಿಧ ಕ್ರೀಡಾಕೂಟದಲ್ಲಿ ವಿಜೇತರಿಗೆ ಬಹುಮಾನ ನೀಡಿಲಾಯಿತು. ಶ್ರೀಮತಿ ಇಂದಿರಾ ಅಜಪಿಲ ಪ್ರಾರ್ಥಿಸಿ, ಕೋಶಾಧಿಕಾರಿ ಶ್ರೀಮತಿ ಭಾರತಿ. ಕೆ ಸ್ವಾಗತಿಸಿ. ಪೂರ್ವಾಧ್ಯಕ್ಷೆ ಶ್ರೀಮತಿ ಕುಸುಮಾ ಕುರಂಬುಡೇಲು ವಂದಿಸಿದರು.ಪೂರ್ವಾಧ್ಯಕ್ಷೆ ಪೂರ್ಣಿಮಾ ಪಡ್ಪು ಕಾರ್ಯಕ್ರಮ ನಿರೂಪಿಸಿದರು.