ಕಳಂಜ ಗ್ರಾಮ ಪಂಚಾಯಿತಿ ವ್ಯಾಪ್ತಿಯ 1 ನೇ ವಾರ್ಡ್ ನ ಗ್ರಾಮಸ್ಥರು ಚುನಾವಣೆಯನ್ನು ಬಹಿಷ್ಕರಿಸುವುದಾಗಿ ಎಚ್ಚರಿಕಾ ಬ್ಯಾನರನ್ನು ಸಾರ್ವಜನಿಕ ಸ್ಥಳದಲ್ಲಿ ಅಳವಡಿಸುವ ಮೂಲಕ ಚುನಾಯಿತ ಪ್ರತಿನಿಧಿಗಳನ್ನು ಮತ್ತು ಅಧಿಕಾರಿಗಳನ್ನು ಎಚ್ಚರಿಸಿದ್ದಾರೆ.
ಕಳಂಜ ಗ್ರಾ.ಪಂ. ವ್ಯಾಪ್ತಿಯ ಒಂದನೇ ವಾರ್ಡ್ ಪಂಜಿಗಾರ್ ಮಣಿಮಜಲು ಸಂಪರ್ಕ ರಸ್ತೆ ಹಾಗೂ ಪೂರಕ ದಾರಿದೀಪಗಳಿಲ್ಲದೆ ಗ್ರಾಮಸ್ಥರು ಸಂಕಷ್ಟ ಅನುಭವಿಸುತ್ತಿದ್ದು, ಈ ಬಗ್ಗೆ ಸ್ಥಳೀಯ ಅಧಿಕಾರಿಗಳಿಗೂ ಸಹಿತ ಕಳಂಜ ಗ್ರಾ.ಪಂ.ಗೆ ಹಲವು ಬಾರಿ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಲಿಲ್ಲ, ಈ ನಿಟ್ಟಿನಲ್ಲಿ ಒಂದನೇ ವಾರ್ಡ್ ಗಳ ಗ್ರಾಮಸ್ಥರು ಮುಂದಿನ ಲೋಕಸಭಾ ಚುನಾವಣೆಯನ್ನು ಬಹಿಷ್ಕಾರ ಮಾಡಲು ನಿರ್ಧರಿಸಿದ್ದು, ಯಾವುದೇ ಕಾರಣಕ್ಕೆ ನಮ್ಮ ವಾರ್ಡಿನ ಸಮಸ್ಯೆ ಬಗೆಹರಿಸದ ಹೊರತು ಮತ ಯಾಚನೆಗೆ ನಮ್ಮ ವಾರ್ಡಿಗೆ ಬಾರದಂತೆ ಎಚ್ಚರಿಕೆಯನ್ನು ನೀಡಿರುವುದಾಗಿ ತಿಳಿದು ಬಂದಿದೆ.