ಸುಳ್ಯ ಪೊಲೀಸ್ ವೃತ್ತ ನಿರೀಕ್ಷಕರ ಕಚೇರಿಯಲ್ಲಿ ಚುನಾವಣಾ ಕರ್ತವ್ಯದ ಬಗ್ಗೆ ಮಾಹಿತಿ ಸಭೆ

0

ಸುಳ್ಯ ವೃತ್ತಕ್ಕೊಳಪಟ್ಟ ಎಲ್ಲಾ ಠಾಣೆಗಳ ಅಧಿಕಾರಿಗಳು ಭಾಗಿ

ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಸುಳ್ಯ ವೃತ್ತ ನಿರೀಕ್ಷಕರ ಕಚೇರಿಯಲ್ಲಿ ಮಾರ್ಚ್ 20 ರಂದು ಸುಳ್ಯ ವಿಧಾನಸಭಾ ಕ್ಷೇತ್ರಕ್ಕೊಳಪಟ್ಟ ಪೊಲೀಸ್ ಠಾಣಾಧಿಕಾರಿಗಳ,ಠಾಣಾ ಬರಹಗಾರರು ,ಗುಪ್ತ ಮಾಹಿತಿ ಸಿಬ್ಬಂದಿಗಳಿಗೆ ಚುನಾವಣಾ ಕರ್ತವ್ಯ ಕುರಿತ ಮಾಹಿತಿ ಸಭೆ ನಡೆಯಿತು.

ಸುಳ್ಯ ವೃತ್ತ ನಿರೀಕ್ಷಕ ಸತ್ಯನಾರಾಯಣ್ ಕೆ ರವರ ನೇತೃತ್ವದಲ್ಲಿ ನಡೆದ ಈ ಸಭೆಯಲ್ಲಿ ಚುನಾವಣಾ ಕರ್ತವ್ಯದ ಬಗ್ಗೆ ಮಾಹಿತಿ ನೀಡಿದ ಅವರು ‘ಬರುವ ಲೋಕಸಭಾ ಚುನಾವಣೆ ಶಾಂತಿಯುತವಾಗಿ,ಸುಸಜ್ಜಿತವಾಗಿ ನಡೆಯಲು ಎಲ್ಲಾ ಪೊಲೀಸ್ ಠಾಣಾಧಿಕಾರಿಗಳ ಸಂಬಂಧಪಟ್ಟ ಸಿಬ್ಬಂದಿ ವರ್ಗದವರ ಸಂಪೂರ್ಣ ಸಹಕಾರ ಅಗತ್ಯವಾಗಿದೆ ಎಂದು ಹೇಳಿದರು. ಅಲ್ಲದೆ ನಾವು ಪೊಲೀಸ್ ಇಲಾಖೆಯವರು ಯಾರೇ ಆಗಿರಲಿ ಯಾವುದೇ ಪಕ್ಷದ ಅಥವಾ ಅಭ್ಯರ್ಥಿಯ ಪರವಾಗಿ ಪ್ರಚಾರ ಇನ್ನಿತರ ಕಾರ್ಯದಲ್ಲಿ ತೊಡಗಿಸಿಕೊಳ್ಳಬಾರದು.
ಹಿರಿಯ ಅಧಿಕಾರಿಗಳು ನೀಡಿರುವ ಮಾರ್ಗದರ್ಶನದ ಪ್ರಕಾರ ನಮ್ಮ ನಮ್ಮ ಕರ್ತವ್ಯಗಳನ್ನು ಪಾಲಿಸಬೇಕು.ಯಾವುದೇ ರೀತಿಯ ಸಂಶಯಗಳು,ಕಾನೂನುಬಾಹಿರ ಚಟುವಟಿಕೆಗಳು ಕಂಡುಬಂದಲ್ಲಿ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿ ಕೂಡಲೇ ಕ್ರಮ ಜರುಗಿಸಿಕೊಳ್ಳಬೇಕು ಎಂದು ಮಾಹಿತಿ ನೀಡಿದರು.

ಸಭೆಯಲ್ಲಿ ಸುಳ್ಯ ಪೊಲೀಸ್ ಠಾಣಾ ಉಪನಿರೀಕ್ಷಕ ಈರಯ್ಯ ದೂಂತೂರು,ಕಡಬ ಠಾಣಾ ಉಪನಿರೀಕ್ಷಕ ಅಭಿನಂದನ್, ಸುಬ್ರಹ್ಮಣ್ಯ ಪೊಲೀಸ್ ಠಾಣಾ ಉಪನಿರೀಕ್ಷಕ ಕಾರ್ತಿಕ್ ಕಾತರಕೆ, ಹಾಗೂ ಬೆಳ್ಳಾರೆ, ಉಪ್ಪಿನಂಗಡಿ, ಠಾಣೆಯ ಅಧಿಕಾರಿಗಳು,ಸಿಬ್ಬಂದಿ ವರ್ಗ,ಠಾಣಾ ಬರಹಗಾರರು, ಗುಪ್ತ ಮಾಹಿತಿ ಸಿಬ್ಬಂದಿಗಳು ಉಪಸ್ಥಿತರಿದ್ದರು.