ಸಂಪಾಜೆ ಅರಣ್ಯ ತಪಾಸಣಾ ಚೆಕ್ ಪೋಸ್ಟ್ ನಲ್ಲಿ ಪೊಲೀಸರಿಂದ ವಾಹನಗಳ ತಪಾಸಣಾ ಕಾರ್ಯ ಆರಂಭ
ಸಾರ್ವತ್ರಿಕ ಲೋಕಸಭಾ ಚುನಾವಣೆ ಘೋಷಣೆಯಾದ ಹಿನ್ನೆಲೆಯಲ್ಲಿ ಕೊಡಗು ಸಂಪಾಜೆ ಅರಣ್ಯ ತಪಾಸಣಾ ಚೆಕ್ ಪೋಸ್ಟ್ ನಲ್ಲಿ ಪೊಲೀಸ್ ಇಲಾಖೆಯ ವತಿಯಿಂದ ವಾಹನ ತಪಾಸಣಾ ಕಾರ್ಯ ಆರಂಭಗೊಂಡಿದೆ.
ಮಾ.16ರಂದು ಲೋಕಸಭಾ ಚುನಾವಣೆ ಘೋಷಣೆಯಾಗಿದ್ದು, ಚುನಾವಣಾ ನೀತಿಸಂಹಿತೆ ಜಾರಿಗೆ ಬಂದ ಹಿನ್ನೆಲೆಯಲ್ಲಿ ಮಾ.17ರಿಂದ ಸಂಪಾಜೆ ಅರಣ್ಯ ತಪಾಸಣಾ ಚೆಕ್ ಪೋಸ್ಟ್ ನಲ್ಲಿ ವಾಹನಗಳ ತಪಾಸಣಾ ಕಾರ್ಯ ಆರಂಭಗೊಂಡಿರುವುದಾಗಿ ತಿಳಿದುಬಂದಿದೆ.