ಬಳ್ಪ ಸರಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲಾ ಹಿರಿಯ ವಿದ್ಯಾರ್ಥಿ ಸಂಘ ರಚನೆ

0

ಬಳ್ಪ ಸರಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಿರಿಯ ವಿದ್ಯಾರ್ಥಿ ಸಂಘವನ್ನು ಪುನರಚನೆ ಮಾಡಲಾಯಿತು. ಸಂಘದ ಅಧ್ಯಕ್ಷರಾಗಿ ಕುಸುಮಾಧರ ಕೊಡಿಬೈಲು ಆಯ್ಕೆಯಾದರು. ಕಾರ್ಯದರ್ಶಿಯಾಗಿ ರಜನೀಶ್ ಕುಳ :ಕೋಶಾಧಿಕಾರಿ ಪ್ರವೀಣ್ ಕುಂಜತ್ತಾಡಿ : ಉಪಾಧ್ಯಕ್ಷರಾಗಿ ಚಂದ್ರಶೇಖರ ಅಕ್ಕೆನಿ ರವರನ್ನು ಆಯ್ಕೆ ಮಾಡಲಾಯಿತು. ಹಾಗೂ ಕಾರ್ಯಕಾರಿ ಸಮಿತಿಗೆ ಸದಸ್ಯರನ್ನು ಆಯ್ಕೆ ಮಾಡಲಾಯಿತು. ನಿಕಟ ಪೂರ್ವ ಅಧ್ಯಕ್ಷ ಸುಬ್ರಹ್ಮಣ್ಯ ಕುಳ ದಾಖಲೆ ಹಸ್ತಾಂತರ ಮಾಡಿ ನೂತನ ಅಧ್ಯಕ್ಷರನ್ನು ಸ್ವಾಗತಿಸಿದರು. ಶಾಲಾ ಮುಖ್ಯಶಿಕ್ಷಕರು ಹಾಗೂ ಶಿಕ್ಷಕ ವೃಂದ ಉಪಸ್ಥಿತರಿದ್ದರು.