ಕೊಡಗು ಸಂಪಾಜೆ ಗ್ರಾಮದ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಕಾಲಾವಧಿ ಜಾತ್ರೆಯು ಎ.11 ಮತ್ತು 12ರಂದು ಬ್ರಹ್ಮಶ್ರೀ ನೀಲೇಶ್ವರ ಆರೋತ್ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಜರುಗಲಿದ್ದು, ಆಮಂತ್ರಣ ಪತ್ರಿಕೆಯನ್ನು ಮಾ.24ರಂದು ದೇವಾಲಯದಲ್ಲಿ ಬಿಡುಗಡೆ ಮಾಡಲಾಯಿತು.
ಸಂಪಾಜೆಯ ಕೀಲಾರು ಕುಟುಂಬ ಮತ್ತು ದಿ. ದೇವಿಪ್ರಸಾದ್ ಕುಟುಂಬಸ್ಥರ ವತಿಯಿಂದ ಶತರುದ್ರಾಭಿಷೇಕ ಕಾರ್ಯಕ್ರಮವು ಶ್ರೀ ಪಂಚಲಿಂಗೇಶ್ವರನ ಸನ್ನಿಧಿಯಲ್ಲಿ ಜರುಗಿತು.
ಈ ಸಂದರ್ಭದಲ್ಲಿ ದೇವಸ್ಥಾನದ ಮೊಕ್ತೇಸರ ಯಂ.ಬಿ. ಸದಾಶಿವ, ಗೌರವಾಧ್ಯಕ್ಷ ರಾಜಾರಾಮ ಕೀಲಾರು, ಅಧ್ಯಕ್ಷ ಜಯಕುಮಾರ್ ಚೆದ್ಕಾರ್, ಕಾರ್ಯದರ್ಶಿ ಕೇಶವ ಚೌಟಾಜೆ, ಟಿ. ಶ್ಯಾಮ್ ಭಟ್, ಜೀರ್ಣೋದ್ಧಾರ ಸಮಿತಿಯ ಕಾರ್ಯದರ್ಶಿ ರಾಜಾರಾಮ ಕಳಗಿ, ಸಹ ಕಾರ್ಯದರ್ಶಿ ಲೋಹಿತ್ ಹೊದ್ದೆಟ್ಟಿ, ಆಡಳಿತ ಮಂಡಳಿಯ ಮತ್ತು ಜೀರ್ಣೋದ್ಧಾರ ಸಮಿತಿಯ ಪದಾಧಿಕಾರಿಗಳು, ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘದ ಪದಾಧಿಕಾರಿಗಳು, ಯುವಕ ಸಂಘದ ಪದಾಧಿಕಾರಿಗಳು, ಸ್ಥಳೀಯ ಸ್ವಸಹಾಯ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.