ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನಲ್ಲಿ ಮೆಕ್ಯಾನಿಕಲ್ ಇಂಜಿನಿಯರಿಗ್ ವಿಭಾಗದ ವಿದ್ಯಾರ್ಥಿ ಸಂಘ (ಒಇಂ)ಪದಾಧಿಕಾರಿಗಳ ಪದಗ್ರಹಣ ಮತ್ತು ಪ್ರೆಶರ್ಸ್ ಡೇ ಆಚರಣೆ

0
      ಕೆ.ವಿ.ಜಿ. ತಾಂತ್ರಿಕ ಮಹಾವಿದ್ಯಾಲಯದ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿ ಸಂಘದ ಉದ್ಘಾಟನೆ ಮತ್ತು ಫ್ರೆಶರ್ಸ್ ಡೇ ಆರೋಹಣ ಕಾರ್ಯಕ್ರಮವು ಮಾ.23ರಂದು ಕಾಲೇಜಿನ ಸಭಾಭವನದಲ್ಲಿ ನಡೆಯಿತು. 

ಋತಾಯು ಆಯುರ್ವೇದ ವೆಲ್‌ನೆಸ್ ಹೋಮ್, ಭಾರಧ್ವಜ್ ಆಶ್ರಮ್, ಸುಳ್ಯ ಇದರ ಸಂಸ್ಥಾಪಕಿ ಡಾ. ಯಶಸ್ವಿನಿ ಭಾರಧ್ವಜ್ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಕಾರ್ಯಕ್ರಮವನ್ನು ಉದ್ಘಾಟಿಸಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಯುವಜನತೆಗೆ ಆಹಾರ ಪದ್ಧತಿ, ಜೀವನಕ್ರಮ ಹಾಗೂ ಯೋಗ ಇದರ ಬಗ್ಗೆ ಮಾಹಿತಿ ನೀಡಿ ಹೊಸ ವಿದ್ಯಾರ್ಥಿಗಳಿಗೆ ವಿಭಾಗ ಪ್ರವೇಶಕ್ಕೆ ಶುಭಾಶಯವನ್ನು ಕೋರಿದರು.


 ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ ಪ್ರಾಂಶುಪಾಲರಾದ ಡಾ. ಸುರೇಶ ವಿ. ಯವರು ಮಾತನಾಡಿ ವಿದ್ಯಾರ್ಥಿಗಳಾದ ನೀವು ಜೀವನದಲ್ಲಿ ಒಂದು ಮುಖ್ಯ ಗುರಿಯನ್ನು ಇಟ್ಟುಕೊಂಡು ಅದನ್ನು ಸಾಧಿಸುವ ಛಲ ನಿಮ್ಮಲ್ಲಿರಬೇಕು ಎಂದು ಹೇಳಿ ವಿದ್ಯಾರ್ಥಿಗಳ ವಿಭಾಗ ಪ್ರವೇಶಕ್ಕೆ ಶುಭ ಹಾರೈಸಿದರು. ಕಾಲೇಜಿನ ಉಪಪ್ರಾಂಶುಪಾಲರು ಮತ್ತು ಡೀನ್ ಸ್ಟುಡೆಂಟ್ ಅಫೇರ್ಸ್  ಡಾ. ಶ್ರೀಧರ್ ಕೆ. ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.


 ಡೀನ್ ಅಕಾಡೆಮಿಕ್ ಹಾಗೂ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥ ಡಾ. ಉಮಾಶಂಕರ್ ಕೆ.ಎಸ್. ಮಾತನಾಡಿ ಮೆಕ್ಯಾನಿಕಲ್ ಇಂಜಿನಿಯರಿಂಗ್ ಅಸೋಸಿಯೇಶನ್ ಬೆಳೆದು ಬಂದ ಹಾದಿ ಹಾಗೂ ಅದರಿಂದ ಸಿಗುವ ಪ್ರಯೋಜನಗಳ ಬಗ್ಗೆ ಮಾಹಿತಿ ನೀಡಿ ಹೊಸ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. 


ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ಸಂಘದ ಸಂಯೋಜಕರಾದ ಪ್ರೊ. ಸುಧೀರ್ ಕೆ.ವಿ., ವಿದ್ಯಾರ್ಥಿ ಸಂಘದ ಅಧ್ಯಕ್ಷ ಶಶಾಂಕ್ ಬಿ. ಬೇಲೆಗದ್ದೆ, ಕಾರ್ಯದರ್ಶಿ ಸಂಜನ್ ಕುಮಾರ್, ಬೋಧಕ ಮತ್ತು ಬೋಧಕೇತರ ವೃಂದ ಹಾಗೂ ವಿದ್ಯಾರ್ಥಿವೃಂದ ಉಪಸ್ಥಿತರಿದ್ದರು. ಶಶಾಂಕ್ ಬಿ. ಬೇಲೆಗದ್ದೆ ಸ್ವಾಗತಿಸಿ, ವಿದ್ಯಾರ್ಥಿನಿ ಶರಣ್ಯ ಪ್ರಾರ್ಥಿಸಿದರು, ಸಾಕ್ಷಿನ್ ರೈ ವಂದಿಸಿದರು. ವಿದ್ಯಾರ್ಥಿಗಳಾದ ಯೋಗೀಶ್ ಪ್ರಸಾದ್ ಹೊಳ್ಳ ಮತ್ತು ಕಿರಣ್ ಕಾರ್ಯಕ್ರಮ ನಿರೂಪಿಸಿದರು. ಸಭಾ ಕಾರ್ಯಕ್ರಮದ ಬಳಿಕ ಮುಖ್ಯ ಅತಿಥಿಯವರಿಂದ " Mind your body - Food, Life style and Yoga for Life" ವಿಷಯದ ಕುರಿತು ಉಪನ್ಯಾಸ ನಡೆಯಿತು, ನಂತರ ವಿದ್ಯಾರ್ಥಿಗಳಿಂದ ಮ್ಯಾಷ್‌ಅಪ್ ಸಂಜೆ, ಫ್ಲಾಶ್‌ಮೊಬ್ ಹಾಗೂ ಇನ್ನಿತರ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.