ದೇವರಲ್ಲಿ, ಧರ್ಮದ ಬಗ್ಗೆ ಸಂಪೂರ್ಣ ನಂಬಿಕೆ ಇದೆ, ರಾಜ್ಯದಲ್ಲಿ ಕಾಂಗ್ರೆಸ್ ಗೆ ಹೆಚ್ಚು ಸೀಟು

0
       ಕರ್ನಾಟಕ ರಾಜ್ಯದ ಉಪಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್ ಮಾ.26 ರಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದರು.  ವಿಶೇಷ ಪೂಜೆ ಸಲ್ಲಿಸಿ ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು. ತದನಂತರ ಹೊಸಳಿಗಮ್ಮ ದೈವದ ದರುಶನ ಪಡೆದು ಪ್ರಸಾದ ಸ್ವೀಕರಿಸಿದರು.

ಬಳಿಕ ಈ ಸುದ್ದಿಗಾರರೊಂದಿಗೆರ ಮಾತನಾಡಿದ ಡಿಕೆಶಿ, ರಾಜ್ಯದಲ್ಲಿ ಕಾಂಗ್ರೆಸ್ ಅಲೆ ಇದೆ .ಅದರೊಂದಿಗೆ ದೇವರ ಆಶೀರ್ವಾದ ಬೇಡಲು ಧರ್ಮಸ್ಥಳ .ಕುಕ್ಕೆ ಸುಬ್ರಹ್ಮಣ್ಯ, ಕೊಲ್ಲೂರು, ಶೃಂಗೇರಿ, ಗೌರಿಗದ್ದೆ, ಗೋಕರ್ಣ, ಮುಂತಾದ ದೇವಸ್ಥಾನಗಳಿಗೆ ಭೇಟಿ ನೀಡಿ ದೇವರ ದರ್ಶನ ಪಡೆಯುವ ಉದ್ದೇಶ ನಮ್ಮದಾಗಿದೆ. ನಮಗೆ ದೇವರಲ್ಲಿ ಸಂಪೂರ್ಣ ನಂಬಿಕೆ ಇದೆ ಧರ್ಮದ ಬಗ್ಗೆ ನಂಬಿಕೆ ಇದೆ ಎಂದರು .

ಈ ಹಿಂದೆ ನಡೆದ ರಾಜ್ಯ ಅಸೆಂಬ್ಲಿ ಚುನಾವಣೆಯಲ್ಲಿ ಕೂಡ ಕೂಡ ದೇವರು ನಮ್ಮನ್ನ ಕೈ ಬಿಟ್ಟಿಲ್ಲ. ಒಳ್ಳೆಯದನ್ನೇ ಮಾಡಿದ್ದಾರೆ. ರಾಜ್ಯದ ಜನತೆಗೆ ಒಳ್ಳೆಯದಾಗಲಿ ಎಂದರು.

ನಕ್ಸಲರು ಶಂಕೆ ಇರುವಂತ ಕೂಜಿ ಮಲೆ ಹಾಗೂ ಐನೆಕಿದು ಗ್ರಾಮಗಳ ಮನೆಗಳಿಗೆ ಬಂದಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಈ ಬಗ್ಗೆ ಪೊಲೀಸ ಅಧಿಕಾರಿ ಗಳೊಂದಿಗೆ ಮಾತನಾಡುತ್ತೇನೆ. ಹಾಗೆ ಕೋವಿ ಪರವಾನಿಗೆ ಇದ್ದವರು ಡಿಪೋಸಿಟ್ ಮಾಡ ಬೇಕೋ ಬೇಡವ ಎನ್ನುವ ಬಗ್ಗೆ ಸಂಬಂಧಪಟ್ಟ ಜಿಲ್ಲಾಧಿಕಾರಿಗಳಲ್ಲಿ ಚರ್ಚಿಸುತ್ತೇನೆ ಎಂದರು.

ಈ ಸಂದರ್ಭದಲ್ಲಿ ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ ಜಯರಾಮ, ಕಡಬ ಬ್ಲಾಕ್ ಸುಧೀರ್ ಕುಮಾರ್ ಶೆಟ್ಟಿ, ಕಾಂಗ್ರೆಸ್ ಮುಖಂಡರುಗಳಾದ ಭರತ್ ಮುಂಡೋಡಿ, ಧನಂಜಯ ಅಡ್ಪಂಗಾಯ, ಮಮತಾ ಗಟ್ಟಿ, ಅಶೋಕ ನಿಕ್ರಾಜೆ, ಪಿಸಿ ವರ್ಗೀಸ್, ಮಾಧವ ಡಿ, ಕೃಷ್ಣಪ್ಪ, ಪ್ರದೀಪ್ ಕಳಿಗೆ, ದಿನೇಶ್ ಮಡ್ತಿಲ, ಹರೀಶ ಇಂಜಾಡಿ ,ರಾಜೀವಿ ರೈ, ವಿಜಯಕುಮಾರ ಸೊರಕೆ, ವಿಮಲ ರಂಗಯ್ಯ, ಸರಸ್ವತಿ ಕಾಮತ್, ಶಿವರಾಮ ರೈ ಸುರೇಶ್ ಭಟ್, ಪವನ್ ಎಂ.ಡಿ ,ಶೋಬಿತ್ ಮುಂತಾದವರು ಹಾಜರಿದ್ದರು.