ಅರಂತೋಡು ಗ್ರಾಮದ ಬಾಜಿನಡ್ಕ ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ದೇವಸ್ಥಾನಲ್ಲಿ ವಾರ್ಷಿಕೋತ್ಸವದ ಅಂಗವಾಗಿ ಯಕ್ಷಗಾನ ಬಯಲಾಟ ಸನ್ಮಾನ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ಮಾ31ರಂದು ನಡೆಯಲಿದೆ.
ಸಾಯಂಕಾಲ ಅಂಗಡಿಮಜಲು ಶ್ರೀ ಅಯ್ಯಪ್ಪ ಭಜನಾ ಮಂಡಳಿಯವರಿಂದ ಭಜನಾ ಕಾರ್ಯಕ್ರಮ ಸುಳ್ಯದವರಿಂದ ಸಂಗೀತ ರಸಮಂಜರಿ ಕಾರ್ಯಕ್ರಮ ಜರುಗಲಿದೆ.
ರಾತ್ರಿ ನಡೆಯುವ ಸಭಾ ಕಾರ್ಯಕ್ರಮವನ್ನು ಶಾಸಕಿ ಭಾಗೀರಥಿ ಮುರುಳ್ಯ ಅವರು ಉದ್ಘಾಟಿಸಲಿದ್ದು, ದೈವಸ್ಥಾನದ ಆಡಳಿತ ಮುಖ್ಯಸ್ಥರಾದ ಶಂಕರ್ ನಾರಾಯಣ ಕಟ್ಟಕೋಡಿ ಅವರು ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಅರಂತೋಡು ಗ್ರಾ.ಪಂ. ಅಧ್ಯಕ್ಷ ಕೇಶವ ಅಡ್ತಲೆ ,ಮಾಜಿ ಜಿ.ಪಂ. ಸದಸ್ಯ ಹರೀಶ್ ಕಂಜಿಪಿಲಿ, ಅರಂತೋಡು – ತೊಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ , ಮರ್ಕಂಜ ಅನ್ನಪೂರ್ಣೇಶ್ವರಿ ಕ್ಷೇತ್ರದ ಯೋಗೇಶ್ವರ ಸಿದ್ದ ಮಠ ರಾಜೇಶ್ ನಾಥ ,ಕಲ್ಲುಗುಂಡಿ ಮಹಾ ವಿಷ್ಣುಮೂರ್ತಿ ದೈವಸ್ಥಾನದ ಅಧ್ಯಕ್ಷ ಜಗದೀಶ ರೈ, ವಿಶ್ವ ಹಿಂದೂ ಪರಿಷತ್ ಬಜರಂಗದಳ ಪ್ರಖಂಡ ಅಧ್ಯಕ್ಷ ಸೋಮಶೇಖರ್ ಪೈಕ, ಜಿಲ್ಲಾ ದೈಹಿಕ ಶಿಕ್ಷಣ ಪರೀಕ್ಷಕ ಲಕ್ಷ್ಮಿಶ ರೈ,ಅರಂತೋಡು ಎನ್. ಎಂ. ಪಿ. ಯು. ಕಾಲೇಜು ಪ್ರಾಂಶುಪಾಲ ರಮೇಶ್ ಎಸ್., ಅಜ್ಜಾವರ ಆಡ್ಪಂಗಾಯ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಟ್ರಸ್ಟ್ ಅಧ್ಯಕ್ಷ ಪಿ ಬಿ. ಸುಧಾಕರ್ ರೈ, ಬಾಜಿನಡ್ಕ ಯಕ್ಷಗಾನ ಬಯಲಾಟ ಸಮಿತಿ ಅಧ್ಯಕ್ಷ ಉಮೇಶ್ ಅಡ್ಕಬಳೆ ಭಾಗವಹಿಸಲಿದ್ದಾರೆ.
ವಿಜಯನಗರ ಜಿಲ್ಲೆ ಕನ್ನಡ ವಿಶ್ವವಿದ್ಯಾನಿಲಯ ಹಂಪಿಯ ಹಿರಿಯ ಪ್ರಾಧ್ಯಾಪಕರು ಡಾ|ಮಾಧವ ಪೆರಾಜೆ ಅವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಗುವುದು.
ಬಳಿಕ ಮಂಗಳೂರಿನ ಬಾಳ ಶ್ರೀ ಬೆಂಕಿನಾಥೇಶ್ವರ ಕೃಪಾಪೋಷಿತ ದಶಾವತಾರ ಯಕ್ಷಗಾನ ಮಂಡಳಿಯವರಿಂದ ಯಕ್ಷಗಾನ ಬಯಲಾಟ ‘ಮಹಿಮೆದ ಮಂತ್ರ ದೇವತೆ’ ಪ್ರದರ್ಶನಗೊಳ್ಳಲಿದೆ.