ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಯವರು ಏ.3ರಂದು ನಾಮಪತ್ರ ಸಲ್ಲಿಸಿದರು.
ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಕಾಲ್ನಡಿಗೆಯ ಜಾಥಾ ಮೂಲಕ ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಮುಲೈಮುಗಿಲನ್ ಅವರಿಗೆ ನಾಮಪತ್ರ ಸಲ್ಲಿಸಿದರು. ಮೆರವಣಿಗೆಗೆ ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿ ಚಾಲನೆ ನೀಡಿದರು.
ಬೆಳಿಗ್ಗೆ ಶರವು ಶ್ರೀ ಮಹಾಗಣಪತಿ ದೇವಸ್ಥಾನ, ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಕಂಕನಾಡಿ ಶ್ರೀ ಬ್ರಹ್ಮಬೈದರ್ಕಳ ಗರೋಡಿಗೆ ತೆರಳಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ನಂತರ ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನಕ್ಕೆ ಆಗಮಿಸಿ ವಿಶೇಷ ಅರ್ಚನೆ ಸಲ್ಲಿಸಿದ ಬಳಿಕ ಮೆರವಣಿಗೆಗೆ ಚಾಲನೆ ನೀಡಲಾಯಿತು.ಗೊಂಬೆ, ಚೆಂಡೆ, ಕೊಂಬು ಸಹಿತ ಮೆರವಣಿಗೆಯಲ್ಲಿ ಕಾರ್ಯಕರ್ತರು ಹೆಜ್ಜೆ ಹಾಕಿದರು. ತೆರೆದ ವಾಹನದಲ್ಲಿ ಅಭ್ಯರ್ಥಿ ಪದ್ಮರಾಜ್ ಆರ್. ಭಾಗವಹಿಸಿದರು.
ದ.ಕ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಮಂಜುನಾಥ ಭಂಡಾರಿ, ಮಾಜಿ ಸಚಿವರು ಹಿರಿಯರಾದ ರಮಾನಾಥ ರೈ ಹಿರಿಯ ನಾಯಕರಾದ ಬಿ ಕೆ ಹರಿಪ್ರಸಾದ್, ಶಾಸಕರಾದ ಅಶೋಕ್ ರೈ ಪರಿಷತ್ ಸದಸ್ಯರಾದ ಹರೀಶ್ ಕುಮಾರ್, ಮಾಜಿ ಶಾಸಕರಾದ ಶಕುಂತಳಾ ಶೆಟ್ಟಿ, ಜೆ.ಆರ್ ಲೋಬೋ, ಪಕ್ಷದ ಮುಖಂಡರಾದ ಐವನ್ ಡಿಸೋಜ, ಇನಾಯತ್ ಆಲಿ, ರಕ್ಷಿತ್ ಶಿವರಾಮ್, ಮಿಥುನ್ ರೈ ಡಾ.ರಘು ಸೇರಿದಂತೆ ಮುಂಚೂಣಿ ಘಟಕದ ಅಧ್ಯಕ್ಷರು, ನಿಗಮದ ಅಧ್ಯಕ್ಷರು, ಹಲವು ನಾಯಕರು, ಈ ಸಂದರ್ಭದಲ್ಲಿ ಜತೆಗಿದ್ದರು.
ಸುಳ್ಯದಿಂದಲೂ ಹಲವು ಮಂದಿ ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.