ಸುಳ್ಯ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಚೂರಿ ಹಿಡಿದು ಪ್ರಯಾಣಿಕರಲ್ಲಿ ಆತಂಕ ಸೃಷ್ಟಿಸಿದ ಯುವಕ

0

ಸುಳ್ಯ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ವ್ಯಕ್ತಿಯೋರ್ವ ಆತಂಕ ಸೃಷ್ಟಿಸಿದ ಘಟನೆ ಇಂದು ಸಂಜೆ ನಡೆದಿದೆ.

ಮಾನಸಿಕ ಅಸ್ವಸ್ಥನಂತೆ ವರ್ತಿಸಿದ ಯುವಕ ಕೈಯಲ್ಲಿ ಚೂರಿ ಹಿಡಿದು ಪ್ರಯಾಣಿಕರಿಗೆ ಕಿರಿಕಿರಿ ಉಂಟು ಮಾಡಿ ಆತಂಕ ಸೃಷ್ಟಿಸಿದ್ದಾನೆ. ಕೂಡಲೇ ಬಸ್ಸು ನಿಲ್ದಾಣದಲ್ಲಿ ಕರ್ತವ್ಯದಲ್ಲಿದ್ದ ಗೃಹರಕ್ಷಕ ದಳದ ಸಿಬ್ಬಂದಿ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದು ಸ್ಥಳಕ್ಕೆ ಬಂದ ಪೊಲೀಸರು ಆತನನ್ನು ಠಾಣೆಗೆ ಕರೆದೋಯ್ದು ವಿಚಾರಣೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.