ಡಾ|| ಅನಿತಾ ದಯಾಕರ್‌ಗೆ ಪಿ.ಎಚ್.ಡಿ. ಪದವಿ

0

ಕೆ.ವಿ.ಜಿ. ದಂತ ಮಹಾವಿದ್ಯಾಲಯದ ಒರಲ್ ಪೆಥೋಲಾಜಿ ಮತ್ತು ಮೈಕ್ರೋಬಯೋಲಾಜಿ ವಿಭಾಗದ ಪ್ರಾಧ್ಯಾಪಕರಾದ ಡಾ|| ಅನಿತಾ ದಯಾಕರ್ ಅವರ “Defferenceial expression of p53,p63,p73 in oral epithelial dysplasia and oral squamous cell carcinoma – An immunohistochemical study ” ಎಂಬ ಸಂಶೋಧನಾತ್ಮಕ ಪ್ರಬಂಧಕ್ಕೆ ನಿಟ್ಟೆ ವಿಶ್ವವಿದ್ಯಾಲಯದಿಂದ ಪಿ.ಎಚ್.ಡಿ. ಪದವಿ ಲಭಿಸಿದೆ.

ಡಾ|| ಅನಿತಾ ದಯಾಕರ್ ರವರು ಕೆ.ವಿ.ಜಿ. ದಂತ ಮಹಾವಿದ್ಯಾಲಯದ ಪೆರಿಯೋಡಾಂಟೋಲಾಜಿ ವಿಭಾಗ ಮುಖ್ಯಸ್ಥ ಡಾ. ದಯಾಕರ್ ಯಂ.ಯಂ. ಉಜಿರೆ ಯವರ ಧರ್ಮಪತ್ನಿ. ಡಾ|| ಅನಿತಾ ದಯಾಕರ್ ರವರು ಸುಳ್ಯ ಕೆವಿಜಿ ದಂತ ಮಹಾವಿದ್ಯಾಲಯದಲ್ಲಿ ಕಳೆದ ಹದಿನೇಳು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದಾರೆ.

ಇವರನ್ನು ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ (ರಿ) ಇದರ ಕಮಿಟಿ ಬಿ ಅಧ್ಯಕ್ಷರಾದ ಡಾ. ರೇಣುಕಾ ಪ್ರಸಾದ್ ಕೆ.ವಿ, ಕಾರ್ಯದರ್ಶಿಗಳಾದ ಡಾ. ಜ್ಯೋತಿ ಆರ್ ಪ್ರಸಾದ್ ಹಾಗೂ ಕಾಲೇಜಿನ ಮುಖ್ಯಕಾರ್‍ಯನಿರ್ವಹಣಾಧಿಕಾರಿ ಡಾ. ಉಜ್ವಲ್ ಯು.ಜೆ, ಪ್ರಾಂಶುಪಾಲರಾದ ಡಾ. ಮೋಕ್ಷಾ ನಾಯಕ್ ಮತ್ತು ಆಡಳಿತ ಮಂಡಳಿಯ ಎಲ್ಲಾ ಸದಸ್ಯರುಗಳು ಅಭಿನಂದಿಸಿದ್ದಾರೆ.