ಅಜಪಿಲ ಶ್ರೀ ಮಹಾವಿಷ್ಣುಮೂರ್ತಿ ದೈವದ ಒತ್ತೆಕೋಲ

0

ದೈವ, ದೇವರ ಅನುಗ್ರಹ ನಮಗೆ ಶಕ್ತಿ ನೀಡುತ್ತದೆ : ರಾಮಕೃಷ್ಣ ಭಟ್

ದೈವ ದೇವರ ಅನುಗ್ರಹ ನಮ್ಮನ್ನು ಬುದ್ದಿ ಪೂರ್ವಕವಾಗಿ ಶಕ್ತಿ ನೀಡುತ್ತದೆ. ನಮ್ಮ ಗುರುಗಳು, ಹಿರಿಯರು ತೋರಿಸಿಕೊಟ್ಟ ದಾರಿಯಲ್ಲಿ ಮುನ್ನಡೆದರೆ, ಅವರ ಚಿಂತನೆಗಳನ್ನು ಜೀವನದಲ್ಲಿ ಅಳವಡಿಸಿಕೊಂಡರೆ ಜೀವನ ಸುಗಮವಾಗುತ್ತದೆ. ನಮ್ಮ ದೇಶದ ಸಂಸ್ಕೃತಿಯೇ ನಮ್ಮ ಜೀವಾಳ. ಅದನ್ನು ಬೆಳೆಸಿ, ಉಳಿಸುವ ಹೊಣೆ ನಮ್ಮ ಮೇಲಿದೆ ಎಂದು ರಾಮಕೃಷ್ಣ ಭಟ್ ಚೂಂತಾರು ಹೇಳಿದರು.

ಅವರು ಎ. 7ರಂದು ಅಜಪಿಲ ಶ್ರೀ ಮಹಾವಿಷ್ಣುಮೂರ್ತಿ ಸೇವಾ ಸಮಿತಿ ಆಶ್ರಯದಲ್ಲಿ ಬೆಳ್ಳಾರೆಯಲ್ಲಿ ನಡೆದ 32ನೇ ವರ್ಷದ ಸಭಾ ಕಾರ್ಯಕ್ರಮದಲ್ಲಿ ಧಾರ್ಮಿಕ ಉಪನ್ಯಾಸ ನೀಡುತ್ತಾ ಅಭಿಪ್ರಾಯಪಟ್ಟರು. ಸೇವಾ ಸಮಿತಿ ಅಧ್ಯಕ್ಷ ಬಾಲಕೃಷ್ಣ ಪೂಜಾರಿ ಚೀಮುಳ್ಳುರವರ ಅಧ್ಯಕ್ಷತೆಯಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸುರೇಶ್ ಕುಮಾರ್ ಶೆಟ್ಟಿ ಪನ್ನೆಗುತ್ತು, ಬೆಳ್ಳಾರೆ ಶ್ರೀ ಸದಾಶಿವ ಚಾರಿಟಬಲ್ ಸೊಸೈಟಿಯ ಅಧ್ಯಕ್ಷ ಬಿ‌‌. ಸುಬ್ರಹ್ಮಣ್ಯ ಜೋಶಿ, ಪ್ರಗತಿಪರ ಕೃಷಿಕ ಶ್ಯಾಮ್ ಪ್ರಕಾಶ್ ಕುರುಂಬುಡೇಲು ಅತಿಥಿಗಳಾಗಿ ಭಾಗವಹಿಸಿದ್ದರು. ಸೇವಾ ಸಮಿತಿ ಗೌರವಾಧ್ಯಕ್ಷ ಆನಂದ ರೈ ಪುಡ್ಕಜೆ, ಬೆಳ್ಳಾರೆ ಸ್ನೇಹಿತರ ಕಲಾ ಸಂಘದ ಅಧ್ಯಕ್ಷ ಪದ್ಮನಾಭ ಗೌಡ ಬೀಡು ಗೌರವ ಉಪಸ್ಥಿತರಾಗಿದ್ದರು. ಸಮಿತಿಯ ಕಾರ್ಯದರ್ಶಿ ಪದ್ಮನಾಭ ಚೂಂತಾರು, ನಿಕಟಪೂರ್ವ ಅಧ್ಯಕ್ಷ ಶೇಷಪ್ಪ ಕುಲಾಲ್ ಬಸ್ತಿಗುಡ್ಡೆ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಮಿತಿಯ ಕೋಶಾಧಿಕಾರಿ ಆನಂದ ಗೌಡ ಪಡ್ಪು ಸ್ವಾಗತಿಸಿ, ಕಾರ್ಯದರ್ಶಿ ಶಶಿಧರ ಮಣಿಯಾಣಿ ವಂದಿಸಿದರು. ಕಳೆದ ವರ್ಷದ ಆಯವ್ಯಯವನ್ನು ಸಭೆಯ ಮುಂದಿಟ್ಟರು. ಕು. ಧೃತಿ ಪಡ್ಪು ಪ್ರಾರ್ಥಿಸಿದರು. ಪ್ರದೀಪ್ ಕುಮಾರ್ ರೈ ಪನ್ನೆ ಮತ್ತು ಶ್ರೀಮತಿ ಸುಲೋಚನಾ ಚಂದ್ರಹಾಸ ಮಣಿಯಾಣಿ ಕಾರ್ಯಕ್ರಮ ನಿರೂಪಿಸಿದರು.

ಕಾರ್ಯಕ್ರಮದ ಯಶಸ್ಸಿಗೆ ಸಹಕಾರ ನೀಡಿದ ಸುರೇಶ್ ಕುಮಾರ್ ಶೆಟ್ಟಿ ಪನ್ನೆಗುತ್ತು, ರತನ್ ಚೂಂತಾರು, ಪದ್ಮನಾಭ ಬೀಡುರವರನ್ನು ವೇದಿಕೆಯಲ್ಲಿ ಗುರುತಿಸಲಾಯಿತು. ಹಿರಿಯ ಯಕ್ಷಗಾನ ಕಲಾವಿದ ಕೊಳ್ತಿಗೆ ನಾರಾಯಣ ಗೌಡರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಇವರ ಸನ್ಮಾನ ಪತ್ರವನ್ನು ಶ್ರೀಮತಿ ಸುಲೋಚನ ಚಂದ್ರಹಾಸ ಮಣಿಯಾಣಿ ಪಡ್ಪು ನಾರಾಯಣ ವಾಚಿಸಿದರು.