ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಸರ್ಕಾರಿ ರಜೆ ಘೋಷಣೆ

0

ಈದುಲ್ ಫಿತ್ರ್ ಹಿನ್ನೆಲೆಯಲ್ಲಿ ಎಪ್ರಿಲ್ 10ರಂದು ಬುಧವಾರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರ್ಕಾರಿ ರಜೆ ಘೋಷಿಸಲಾಗಿದೆ.

ನಿಗದಿತ ಪರೀಕ್ಷೆಗಳು ಬಿಟ್ಟು, ಉಳಿದಂತೆ ಸರ್ಕಾರಿ ಕಚೇರಿಗಳು ಮುಚ್ಚಿರುತ್ತವೆ. ಎ‌ .11ರಂದು ಕರ್ತವ್ಯದ ದಿನವಾಗಿರುತ್ತದೆ.

ವಿಧಾನ ಸಭೆ ಸ್ಪೀಕರ್ ಯು.ಟಿ.ಖಾದರ್ ಅವರ ಮನವಿಯಂತೆ ಸರ್ಕಾರದ ಅಧೀನ ಕಾರ್ಯದರ್ಶಿ ವಿಜಯ ಕುಮಾರ್ ಎಚ್.ಬಿ. ಆದೇಶ ಹೊರಡಿಸಿದ್ದಾರೆ.