ಕೆ.ವಿ.ಜಿ. ಕಾಲೇಜ್ ಆಫ್ ಇಂಜಿನಿಯರಿಂಗ್ ಸುಳ್ಯ ಇದರ ಗವರ್ನಿಂಗ್ ಕೌನ್ಸಿಲ್ ಅಧ್ಯಕ್ಷರಾದ ಡಾ. ರೇಣುಕಾಪ್ರಸಾದ್ ಕೆ. ವಿ. ಯವರು ತಮ್ಮ ತಂದೆಯವರಾದ ಡಾ. ಕುರುಂಜಿ ವೆಂಕಟ್ರಮಣ ಗೌಡರ ಹೆಸರಿನಲ್ಲಿ ಅರ್ಹ ಪ್ರತಿಭಾವಂತ ವಿದ್ಯಾರ್ಥಿಗಳ ಇಂಜಿನಿಯರಿಂಗ್ ಕಲಿಕೆಗೆ ಪ್ರತೀ ಶೈಕ್ಷಣಿಕ ವರ್ಷದಲ್ಲಿ ನಡೆಸುವ ?ಡಾ. ಕುರುಂಜಿ ವೆಂಕಟ್ರಮಣ ಗೌಡ ವಿದ್ಯಾರ್ಥಿ ವೇತನ ಪರೀಕ್ಷೆಗೆ? ಈ ವರ್ಷವೂ ಅಭೂತಪೂರ್ವ ಪ್ರತಿಕ್ರಿಯೆ ದೊರೆತಿದೆ.
ವಿದ್ಯಾರ್ಥಿವೇತನ ನೀಡುವ ಸಲುವಾಗಿ ಆನ್ಲೈನ್ ಮುಖಾಂತರ ಏ. ೧೦ರಂದು ದ್ವಿತೀಯ ಪಿ.ಯು.ಸಿ. ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳಿಗೆ ನಡೆಸಿದ ಈ ಪರೀಕ್ಷೆಯನ್ನು ರಾಜ್ಯದ ಹಲವು ಜಿಲ್ಲೆಗಳ ಹಾಗೂ ಕೇರಳ ರಾಜ್ಯದ ಒಟ್ಟು ೯೮೬ ವಿದ್ಯಾರ್ಥಿಗಳು ಬರೆದರು. ಪರೀಕ್ಷೆ ಬರೆದ ಅರ್ಹ ವಿದ್ಯಾರ್ಥಿಗಳು ಕಾಲೇಜಿನ ವಿವಿಧ ಇಂಜಿನಿಯರಿಂಗ್ ಕೊರ್ಸುಗಳಿಗೆ ಪ್ರವೇಶ ಪಡೆಯುವ ಸಂದರ್ಭ ವಿದ್ಯಾರ್ಥಿವೇತನ ಪಡೆಯಲಿದ್ದು, ಕಾಲೇಜಿನ ಆಡಳಿತ ಮಂಡಳಿ ಈ ಉದ್ದೇಶಕ್ಕಾಗಿ ಪ್ರತಿವರ್ಷ ಸುಮಾರು ೪೮ ಲಕ್ಷ ರೂ ವ್ಯಯಿಸಲಿದೆ. ಪರೀಕ್ಷೆಯ ಫಲಿತಾಂಶವನ್ನು ಏ. ೨೭ರಂದು ಕಾಲೇಜಿನ ವೆಬ್ಸೈಟ್ನಲ್ಲಿ ಪ್ರಕಟಿಸಲಾಗುವುದು ಮತ್ತು ಇದರ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ ೯೮೪೫೮೬೬೫೨೮ ಸಂಪರ್ಕಿಸುವಂತೆ ಸಂಸ್ಥೆಯ ಪ್ರಕಟಣೆ ತಿಳಿಸಿದೆ.