ಸುಳ್ಯ ಪೊಲೀಸ್ ಠಾಣೆಯಲ್ಲಿ ಅಂಬೇಡ್ಕರ್ ಜನ್ಮದಿನಾಚರಣೆ

0

ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜೀವನ ತತ್ವವನ್ನು ಪಾಲಿಸಿ ಜೀವಿಸುವುದು ಪ್ರತಿಯೊಬ್ಬ ನಾಗರಿಕರ ಕರ್ತವ್ಯ: ಈರಯ್ಯ ದೂಂತೂರು

ಸಂವಿಧಾನ ಶಿಲ್ಪಿ ಡಾ ಬಿ ಆರ್ ಅಂಬೇಡ್ಕರ್ ಜನ್ಮದಿನಾಚರಣೆಯನ್ನು ಇಂದು ಸುಳ್ಯ ಪೊಲೀಸ್ ಠಾಣೆಯಲ್ಲಿ ಆಚರಿಸಲಾಯಿತು.
ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಮಾತನಾಡಿದ ಠಾಣಾ ಉಪನಿರೀಕ್ಷಕ ಈರಯ್ಯ ದೂಂತೂರು ಬಾಬಾಸಾಹೇಬ್ ಅಂಬೇಡ್ಕರ್ ರವರ ಜೀವನ ತತ್ವವನ್ನು ಪ್ರತಿಯೊಬ್ಬ ನಾಗರಿಕರು ತಮ್ಮ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಇದರಿಂದ ಉತ್ತಮ ಸಮಾಜ ಮತ್ತು ದೇಶವನ್ನು ಕಟ್ಟಲು ಸಾಧ್ಯ. ಅವರು ನೀಡಿದ ಸಂವಿಧಾನದಿಂದ ಸಮಾಜದಲ್ಲಿ ಪ್ರತಿಯೊಬ್ಬರಿಗೂ ಅವರವರ ಹಕ್ಕುಗಳನ್ನು ಪಡೆಯಲು ಸಾಧ್ಯವಾಗುತ್ತಿದೆ ಎಂದು ಹೇಳಿದರು.
ಸುಳ್ಯ ಪೊಲೀಸ್ ಠಾಣೆಯ ಎಲ್ಲಾ ಸಿಬ್ಬಂದಿ ವರ್ಗದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.