ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ನಕ್ಸಲ್ ಪೀಡಿತ ಬೂತುಗಳಿಗೆ, ಹಾಗೂ ಸೂಕ್ಷ್ಮ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಹಾಗೂ ಎಸ್ ಪಿ ಭೇಟಿ ನೀಡಿ ಪರಿಶೀಲನೆ ನಡೆಸಿ ಸ್ಥಳೀಯ ನಿವಾಸಿಗಳಿಗೆ ಧೈರ್ಯ ತುಂಬುವ ಕಾರ್ಯವನ್ನು ಮಾಡಿದ್ದಾರೆ.
ನಕ್ಸಲ್ ಪೀಡಿತ ಪ್ರದೇಶವಾದ ಮೊಡಪ್ಪಾಡಿ,ಸೂಕ್ಷ್ಮ ಪ್ರದೇಶವಾದ ಜಾಲ್ಸೂರು, ಹಾಗೂ ಗಡಿ ಪ್ರದೇಶಗಳಾದ ಮುರೂರು,ಕಲ್ಲು ಗುಂಡಿ ಚೆಕ್ ಪೋಸ್ಟ್ ಗಳಿಗೆ ಭೇಟಿ ನೀಡಿ ಚುನಾವಣಾ ಬೂತ್ ಗಳ ಸಿದ್ಧತೆಗಳ ಬಗ್ಗೆ ಪರಿಶೀಲನೆ ನಡೆಸಿದ್ದಾರೆ.
ಅಲ್ಲದೆ ಸ್ಥಳೀಯ ಸಾರ್ವಜನಿಕರನ್ನು ಒಟ್ಟುಗೂಡಿಸಿ ಚರ್ಚೆಗಳನ್ನು ನಡೆಸಿ ಸಾರ್ವಜನಿಕರಲ್ಲಿ ಧೈರ್ಯ ತುಂಬುವ ಕೆಲಸ ಕಾರ್ಯಗಳನ್ನು ಮಾಡಿದ್ದಾರೆ.
ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಎಂ. ಪಿ ಮುಲೈ ಮುಗಿಲನ್,ಎಸ್ ಪಿ ಬಿ ರಿಷ್ವಂತ್, ಡಿ ವೈ ಎಸ್ ಪಿ ಅರುಣ್ ನಾಗೇಗೌಡ, ಸುಳ್ಯ ತಹಶೀಲ್ದಾರ್ ಜಿ ಮಂಜುನಾಥ್,ಸುಳ್ಯ ಪೊಲೀಸ್ ವೃತ್ತ ನಿರೀಕ್ಷಕ ಸತ್ಯನಾರಾಯಣ್, ಸುಳ್ಯ ಪೊಲೀಸ್ ಠಾಣಾ ಉಪನಿರೀಕ್ಷಕ ಈರಯ್ಯ ದೂಂತೂರು ಹಾಗೂ ಇನ್ನಿತರ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.