ನಿಮ್ಮ ಮನೆ-ಮನದಲ್ಲಿ ಸ್ವರ್ಣ ಪ್ರಭೆ ಬೆಳಗಿಸಿ!
ಬುಕ್ಕಿಂಗ್ ಹೇಗೆ? ಹೇಗಿದೆ ಆಫರ್? ಏನೇನಿದೆ ಸ್ಪೆಷಲ್? – ಇಲ್ಲಿದೆ ಮಾಹಿತಿ…
ಹಿಂದೂಗಳ ಜನಪ್ರಿಯ ಹಬ್ಬ ಅಕ್ಷಯ ತೃತಿಯಕ್ಕೆ ವಿಶೇಷವಾದ ಮಹತ್ವವಿದೆ. ಈ ವಿಶೇಷ ದಿನದಂದು ಮೌಲ್ಯಯುತವಾದ ಅಥವಾ ಅಮೂಲ್ಯವಾದ ವಸ್ತುಗಳನ್ನು ಖರೀದಿಸಲು ಪ್ರಶಸ್ತ ಕಾಲವೆಂದು ಶಾಸ್ತ್ರ ಪುರಾಣಗಳಲ್ಲಿ ಉಲ್ಲೇಖವಾಗಿದೆ. ನಮ್ಮ ಜೀವನಕ್ಕೊಂದು ಭದ್ರತೆಯನ್ನು ಮತ್ತು ಸೌಂದರ್ಯಕ್ಕೊಂದು ಗಂಭೀರತೆಯನ್ನು ಒದಗಿಸುವಲ್ಲಿ ಬಂಗಾರ ಪ್ರಮುಖ ಪಾತ್ರವನ್ನು ವಹಿಸುತ್ತದೆ. ಹಾಗಾಗಿ ಅಕ್ಷಯ ತೃತಿಯ ಶುಭ ಸಂದರ್ಭದಲ್ಲಿ ಚಿನ್ನವನ್ನು ಖರೀದಿಸಿದರೆ ನಮ್ಮ ಬದುಕು ಬಂಗಾರದಂತೆ ಹಸನಾಗುತ್ತದೆ ಎಂಬ ನಂಬಿಕೆ ತಲೆತಲಾಂತರಗಳಿಂದ ಭಾರತೀಯರಲ್ಲಿ ಮೂಡಿ ಬಂದಿದೆ.
ಅಕ್ಷಯ ತೃತಿಯ ದಿನದಂದು ಚಿನ್ನಾಭರಣ ಖರೀದಿಯಲ್ಲಿ ಉಂಟಾಗಬಹುದಾದ ನೂಕುನುಗ್ಗಲನ್ನು ತಪ್ಪಿಸಲು ಚಿನ್ನಾಭರಣ ಮಳಿಗೆಗಳು ಮುಂಗಡ ಬುಕ್ಕಿಂಗ್ ವ್ಯವಸ್ಥೆಯನ್ನು ಮಾಡುತ್ತಿರುವುದನ್ನು ಇತ್ತೀಚಿನ ದಿನಗಳಲ್ಲಿ ನಾವು ಕಾಣುತ್ತಿದ್ದೇವೆ.
ಅದೇ ರೀತಿಯಲ್ಲಿ, ಪ್ರತಿಷ್ಟಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ನಲ್ಲಿ ಗ್ರಾಹಕರಿಗೆ ಅಕ್ಷಯ ತೃತೀಯ ಪ್ರಯುಕ್ತ ಮುಂಗಡ ಬುಕ್ಕಿಂಗ್ ಆಫರ್ ಏಪ್ರಿಲ್ 20ರಿಂದ ಮೇ 09ರವರೆಗೆ ಲಭ್ಯವಿದೆ. ಈ ಆಫರ್ ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್ ನ ಪುತ್ತೂರು, ಮೂಡಬಿದ್ರೆ, ಸುಳ್ಯ, ಕುಶಾಲನಗರ ಹಾಗೂ ಹಾಸನ ಮಳಿಗೆಗಳಲ್ಲಿ ಲಭ್ಯವಿದೆ.
ಸಂಸ್ಕೃತದಲ್ಲಿ ಅಕ್ಷಯ ಎಂದರೆ ಶಾಶ್ವತ ಎಂದರ್ಥ ಅಕ್ಷಯ ತೃತೀಯ ಎಂಬುವುದು ಶುಭದ ಸಂಕೇತವಾಗಿದೆ. ಈ ಸಂದರ್ಭದಲ್ಲಿ ಜನರು ಚಿನ್ನ ಬೆಳ್ಳಿಯಂತಹ ಅಮೂಲ್ಯ ಲೋಹಗಳನ್ನು ಖರೀದಿಸುತ್ತಾರೆ ಏಕೆಂದರೆ ಇದು ಕುಟುಂಬಕ್ಕೆ ಸಮೃದ್ಧಿ ಮತ್ತು ಆದೃಷ್ಟವನ್ನು ತರುತ್ತದೆ ಎಂಬುದು ನಂಬಿಕೆ ಆದುದರಿಂದ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ತಮ್ಮೆಲ್ಲ ನೆಚ್ಚಿನ ಗ್ರಾಹಕರಿಗೆ ಅಕ್ಷಯ ತೃತೀಯ ಪ್ರಯುಕ್ತ ಮುಂಗಡ ಬುಕ್ಕಿಂಗ್ ಆಫರ್, ಮದುವೆ ಆಭರಣಗಳ ಖರೀದಿಗೆ ವಿಶೇಷ ರಿಯಾಯಿತಿ ಹಾಗೂ ಗ್ರಾಹಕರಿಗೆ ತಮ್ಮ ಮೆಚ್ಚಿನ ಆಭರಣಗಳನ್ನು ಆಯ್ಕೆ ಮಾಡಿ ಚಿನ್ನದ ನಾಣ್ಯವನ್ನು ಗೆಲ್ಲುವ ಸುವರ್ಣವಕಾಶ ಕಲ್ಪಿಸಿದೆ.
ಪುತ್ತೂರಿನ ಪುಣ್ಯ ನೆಲದಲ್ಲಿ 1957ರಲ್ಲಿ ಆರಂಭಗೊಂಡ ಸಂಸ್ಥೆಯು ಆಭರಣಗಳ ಮಾರಾಟದಲ್ಲಿ ತನ್ನದೇ ಛಾಪು ಮೂಡಿಸಿದೆ. ವಿಶ್ವಾಸ, ಪರಿಶುದ್ಧತೆ, ಪರಂಪರೆ, ವಿನ್ಯಾಸ ಹಾಗೂ ಗ್ರಾಹಕ ಸೇವೆಗಳಿಗೆ ಸಂಸ್ಥೆ ಮನೆಮಾತಾಗಿದೆ. ಆಂಟಿಕ್ ಆಭರಣಗಳು, ಅನ್ ಕಟ್ ಡೈಮಂಡ್ಸ್ ಹಾಗೂ ಅಮೂಲ್ಯ ಹರಳುಗಳು, ಲೈಟ್ವೈಟ್ ಆಭರಣಗಳ ವಿಶೇಷ ಸಂಗ್ರಹವಿದ್ದು ಗ್ರಾಹಕರು ಆರಾಮದಾಯಕವಾಗಿ ಶಾಪಿಂಗ್ ಮಾಡಲು ಉತ್ತಮ ಪಾರ್ಕಿಂಗ್ ವ್ಯವಸ್ಥೆ ಕೂಡಾ ಲಭ್ಯವಿದೆ.
ಆಧುನಿಕ ಮತ್ತು ಪಾರಂಪರಿಕ ಚಿನ್ನದ ಆಭರಣಗಳು, ವಜ್ರಾಭರಣಗಳಿಗೆ ಹಾಗೂ ಗುಣಮಟ್ಟದ ಚಿನ್ನಾಭರಣಗಳ ಮಾರಾಟದಲ್ಲಿ ಹೆಸರುವಾಸಿಯಾಗಿರುವ ಸಂಸ್ಥೆಯು ಮೂಡಬಿದ್ರೆ, ಸುಳ್ಯ, ಕುಶಾಲನಗರ ಹಾಗೂ ಹಾಸನದಲ್ಲಿ ತಮ್ಮ ಮಳಿಗೆಗಳನ್ನು ಹೊಂದಿದೆ.