ಮರಕತ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ದೇವಿಯ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ಕ್ಷೇತ್ರ ಪಾಲಿನಿ ಚಾಮುಂಡಿ ಮತ್ತು ಪರಿವಾರ ದೈವಗಳ ನೇಮೋತ್ಸವ ಏ.22 – ಏ.23 ರಂದು ನಡೆಯಲಿದೆ.
ಏ.15 ರಂದು ಗೊನೆ ಕಡಿಯುವ ಕಾರ್ಯಕ್ರಮ ನಡೆಯಿತು.
ಏ.22 ರ ಬೆಳಿಗ್ಗೆ ಹಸಿರುವಾಣಿ ಸಮರ್ಪಣೆ, ಚಂಡಿಕಾ ಹೋಮ ನಡೆಯಿತು. ಮುಂಜಾನೆ ಅರ್ಧ ಏಕಾಹ ಭಜನೆ ಆರಂಭವಾಗಿ ಸೂರ್ಯಾಸ್ತದ ತನಕ ನಡೆಯಲಿದೆ. ಪೂ. ಗಂಟೆ 11ಕ್ಕೆ ಉಗ್ರಾಣ ತುಂಬಿಸುವುದು ಕಾರ್ಯಕ್ರಮ ನಡೆಯಲಿದೆ. ಮಧ್ಯಾಹ್ನ
ಮಹಾಪೂಜೆ ನಡೆಯಲಿದೆ. ಬಳಿಕ ಪ್ರಸಾದ ವಿತರಣೆ ನಡೆದು ಅನ್ನಸಂತರ್ಪಣೆ ನಡೆಯಲಿದೆ. ಸಂಜೆ 6.30ರಿಂದ 8.00ರ ತನಕ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ರಾತ್ರಿ ಗಂಟೆ 8-00ಕ್ಕೆ ಮಹಾಪೂಜೆ ನಡೆಯಲಿದೆ. ರಾತ್ರಿ ಗಂಟೆ 8-30ಕ್ಕೆ ದೇವರ ಬಲಿ ಹೊರಟು ಶ್ರೀ ಭೂತ ಬಲಿ ಉತ್ಸವ, ವಸಂತಕಟ್ಟೆಪೂಜೆ ನಡೆಯಲಿದೆ.
ಏ. 23 ಪೂ.ಗಂ. 8-00 ಕ್ಕೆ ಗಣಪತಿ ಹವನ, ಕಲಶ ಪೂಜೆ, ಪೂ. ಗಂಟೆ 9-00ರಿಂದ ಶ್ರೀ ದೇವರ ಬಲಿ ಹೊರಟು ಉತ್ಸವ, ದರ್ಶನ ಬಲಿ, ಬಟ್ಟಲು ಕಾಣಿಕೆ ನಡೆದಿ ಪ್ರಸಾದ ವಿತರಣೆ ನಡೆಯಲಿದೆ. ಮಧ್ಯಾಹ್ನ ಗಂಟೆ 12-00ರಿಂದ ದೇವರಿಗೆ ಕಲಶಾಭಿಷೇಕ, ಮಹಾಪೂಜೆ, ವೈದಿಕ ಮಂತ್ರಾಕ್ಷತೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ. ರಾತ್ರಿ 7-00 ರ ಬಳಿಕ ರಂಗಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆದಿ ರಾತ್ರಿ ಗಂಟೆ 8-00 ರಿಂದ ಶ್ರೀ ಕ್ಷೇತ್ರದ ದೈವಗಳ ನೇಮೋತ್ಸವ ನಡೆಯಲಿದೆ.