ಸುಳ್ಯ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ವಿವಿಧ ಇಲಾಖೆಗಳಲ್ಲಿ ಕರ್ತವ್ಯ ನಿರತರಾಗಿರುವ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಅಂಚೆ ಮತದಾನದ ಮೂಲಕ ತಮ್ಮ ಹಕ್ಕನ್ನು ಚಲಾಯಿಸಿದರು.
ಏಪ್ರಿಲ್ 21 ಹಾಗೂ 22ರಂದು ಸುಳ್ಯ ತಾಲೂಕು ಕಚೇರಿಯಲ್ಲಿ ಅಂಚೆ ಮತದಾನಕ್ಕೆ ಅವಕಾಶ ನೀಡಿದ್ದು ಸುಳ್ಯ ಬೆಳ್ಳಾರೆ ಸುಬ್ರಮಣ್ಯ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅಧಿಕಾರಿಗಳು ಮತದಾನವನ್ನು ಮಾಡಿದರು.
ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 155 ಮಂದಿ ಮತದಾರರಿದ್ದು ಏಪ್ರಿಲ್ 21ರಂದು 43 ಮತಗಳು ಚಲಾವಣೆಯಾಗಿದ್ದು ಉಳಿದ 111 ಮತದಾರರು ಇಂದು ಮತದಾನ ಮಾಡಲಿದ್ದಾರೆ.
ಸಂಜೆಯ ವೇಳೆಗೆ ಈ ಪ್ರಕ್ರಿಯೆ ಕೊನೆಗೊಳ್ಳಲಿದ್ದು ಒಟ್ಟು ಎಷ್ಟು ಮತದಾನ ಆಗಿದೆ ಎಂಬುವುದು ಇಂದು ಸಂಜೆ ತಿಳಿಯಲಿದೆ.
ಮತದಾನದಲ್ಲಿ ಪೊಲೀಸ್ ಇಲಾಖೆಯ ಅಧಿಕಾರಿಗಳು ಸಿಬ್ಬಂದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ಈ ಅಂಚೆ ಮತದಾನ ಕೇಂದ್ರದಲ್ಲಿ ನೋಡಲ್ ಅಧಿಕಾರಿಯಾಗಿ ಸುಳ್ಯ ಕ್ಷೇತ್ರ ಶಿಕ್ಷಣಾಧಿಕಾರಿ ರಮೇಶ್ ಕಾರ್ಯನಿರ್ವಹಿಸುತ್ತಿದ್ದು ತಹಶೀಲ್ದಾರ್ ಮಂಜುನಾಥ್ ಜಿ ಹಾಗೂ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.