ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಆಗಮಿಸಿದ ಬೆಂಗಳೂರಿನ ಮಂಜುನಾಥ ಎಂಬ ಯಾತ್ರಾರ್ಥಿಯೊಬ್ಬರು ಏ.22 ರಂದು ಬಸ್ ನಿಂದ ಬಿದ್ದು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ವರದಿಯಾಗಿದೆ.
ಈ ಸಂಬಂಧ ಸುಬ್ರಹ್ಮಣ್ಯ ಠಾಣೆಯಲ್ಲಿ ದೂರು ದಾಖಲಾಗಿದ್ದು, ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕೆಎ 19 ಎಫ್ 3149 ಕೆಎಸ್ಆರ್ಟಿಸಿ ಬಸ್ಸಿನಲ್ಲಿ ತೆರಳುತ್ತಿದ್ದಾಗ, ಸುಬ್ರಹ್ಮಣ್ಯದ ಕಾಶಿಕಟ್ಟೆ ಬಳಿ ತಲುಪುವಾಗ, ಬಸ್ಸಿನ ಚಾಲಕನು ನಿರ್ಲಕ್ಷ್ಯ ಹಾಗೂ ಅಜಾಗರೂಕತೆಯಿಂದ ಚಲಾಯಿಸಿದ್ದು, ಬಸ್ಸಿನ ನಿರ್ವಾಹಕರು ಬಸ್ಸಿನ ಬಾಗಿಲನ್ನು ಸರಿಯಾಗಿ ಹಾಕದೇ ಇದ್ದುದರಿಂದ ಬೆಂಗಳೂರಿನ ಮಂಜುನಾಥ ರವರು ಬಸ್ಸಿನಿಂದ ಕೆಳಗೆ ಬಿದ್ದು ಗಂಭಿರವಾಗಿ ಗಾಯಗೊಂಡಿದ್ದರು. ಅವರನ್ನು ಸುಳ್ಯ ಕೆವಿಜಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ, ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಕೆ.ಎಂ.ಸಿ ಆಸ್ಪತ್ರೆಯಲ್ಲಿ ದಾಖಲಿಸಿದ್ದು, ಗಾಯಾಳು ಚಿಕಿತ್ಸೆ ಫಲಕಾರಿಯಾಗದೇ ಮೃತ ಪಟ್ಟಿರುವುದಾಗಿ ಮಂಜುನಾಥ ಅವರ ಮಗ ರಂಜನ್ ದೂರು ನೀಡಿದ್ದಾರೆ.