ಕೇರ್ಪಡ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಶ್ರೀ ದೇವರ ಪ್ರತಿಷ್ಠಾ ವರ್ಧಂತಿ ಉತ್ಸವ

0

ಕೇರ್ಪಡ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಶ್ರೀ ದೇವರ ಪ್ರತಿಷ್ಠಾ ವರ್ಧಂತಿ ಉತ್ಸವ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಎ.25 ರಂದು ಜರುಗಿತು. ಎ.25ರಂದು ಬೆಳಿಗ್ಗೆ ದೇವತಾ ಪ್ರಾರ್ಥನೆ, ಆಚಾರ್ಯವರಣ, ಸ್ವಸ್ತಿ ಪುಣ್ಯಾಹ ವಾಚನ, ಮಹಾಗಣಪತಿ ಹೋಮ, ಪಂಚ ವಿಂಶತಿಕಲಶ ಪೂಜೆ, ಮಧ್ಯಾಹ್ನ ಶ್ರೀ ದೇವರಿಗೆ ಸಾನ್ನಿಧ್ಯ ಕಲಶಾಭಿಷೇಕ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು.

ಸಂಜೆ ಭಜನಾ ಕಾರ್ಯಕ್ರಮ,ದೇವತಾ ಪ್ರಾರ್ಥನೆ ಮತ್ತು ಸೇವಾ ರಂಗಪೂಜೆ ಪ್ರಾರಂಭವಾಗಿ ರಾತ್ರಿ 9.00 ಗಂಟೆಗೆ ಮಹಾಪೂಜೆ, ಅನ್ನಸಂತರ್ಪಣೆ ನಡೆಯಿತು.ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ವಸಂತ ನಡುಬೈಲು ಮತ್ತು ಸದಸ್ಯರು,ಸೇವಾ ಸಮಿತಿ, ಮಹಿಳಾ ಸೇವಾ ಸಮಿತಿ ಮತ್ತು ವಿವಿಧ ಸಮಿತಿಗಳ ಪದಾಧಿಕಾರಿಗಳು ಮತ್ತು ಸದಸ್ಯರು, ಅರ್ಚಕರು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.