ಶಿವಮೊಗ್ಗ ಲೋಕಸಭಾ ಕ್ಷೇತ್ರದ ಚುನಾವಣಾ ಪ್ರಚಾರದಲ್ಲಿ ಕೆ‌.ಪಿ.ಸಿ.ಸಿ. ಪ್ರಧಾನ ಕಾರ್ಯದರ್ಶಿ ಟಿ.ಎಂ. ಶಹೀದ್ ಭಾಗಿ

0

ಶಿವಮೊಗ್ಗ ಲೋಕಸಭಾ ಕ್ಷೇತ್ರದ ಚುನಾವಣೆಯು ಮೇ.7ರಂದು ನಡೆಯಲಿದ್ದು, ಮೇ.2ರಂದು ಶಿವಮೊಗ್ಗದಲ್ಲಿ ನಡೆದ ಕಾಂಗ್ರೆಸ್ ಚುನಾವಣಾ ಪ್ರಚಾರ ಸಭೆಯಲ್ಲಿ ಕೆ.ಪಿ.ಸಿ.ಸಿ. ಪ್ರಧಾನ ಕಾರ್ಯದರ್ಶಿ ಹಾಗೂ ಬೈಂದೂರು ವಿಧಾನಸಭಾ ಕ್ಷೇತ್ರದ ಚುನಾವಣಾ ಉಸ್ತುವಾರಿ ಟಿ.ಎಂ.‌ ಶಹೀದ್ ತೆಕ್ಕಿಲ್ ಅವರು ಭಾಗವಹಿಸಿದರು.

ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಶ್ರೀಮತಿ ಗೀತಾ ಶಿವರಾಜ್ ಕುಮಾರ್ ಅವರ ಪರವಾಗಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಎ.ಐ.ಸಿ.ಸಿ. ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಹಾಗೂ ಕೆ.ಪಿ.ಸಿ.ಸಿ. ಅಧ್ಯಕ್ಷ ಡಿ. ಕೆ. ಶಿವಕುಮಾರ್,ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಸಚಿವ ಮಧು ಬಂಗಾರಪ್ಪ, ಕೆಪಿಸಿಸಿ ಕಾರ್ಯಧ್ಯಕ್ಷ ಮಂಜುನಾಥ್ ಭಂಡಾರಿ, ಸೇರಿದಂತೆ ಕಾಂಗ್ರೆಸ್ ಪಕ್ಷದ ಸಚಿವರುಗಳು , ಶಾಸಕರುಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.