ನಾಳೆ ಉಬರಡ್ಕ ಮಿತ್ತೂರು ಸಹಕಾರಿ ಸಂಘದ ನೂತನ ಕಟ್ಟಡ `ಸಿರಿ ಸಹಕಾರ ಸೌಧ’ ಲೋಕಾರ್ಪಣೆ

0

ಉಬರಡ್ಕ ಮಿತ್ತೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ನೂತನವಾಗಿ ನಿರ್ಮಿಸಲಾಗಿರುವ ಕಟ್ಟಡ ಸಿರಿ ಸಹಕಾರ ಸೌಧ ದ ಲೋಕಾರ್ಪಣೆ ಮೇ.೪ ರಂದು ಉಬರಡ್ಕ ದಲ್ಲಿ ನಡೆಯಲಿದೆ.


ಸಹಕಾರ ಸಂಘದ ಅಧ್ಯಕ್ಷ ದಾಮೋದರ ಗೌಡ ಮದುವೆಗದ್ದೆ ಯವರ ಅಧ್ಯಕ್ಷತೆಯಲ್ಲಿ ನೂತನ ಕಟ್ಟಡದ ಉದ್ಘಾಟನೆ ನಡೆಯಲಿದ್ದು, ಸಿರಿ ಸಹಕಾರ ಸೌಧವನ್ನು ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷರಾದ ಸಹಕಾರ ರತ್ನ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಲೋಕಾರ್ಪಣೆ ಮಾಡಲಿದ್ದಾರೆ. ಸುಳ್ಯ ವಿಧಾನ ಸಭಾ ಕ್ಷೇತ್ರದ ಶಾಸಕಿ ಕು.ಭಾಗೀರಥಿ ಮುರುಳ್ಯ
ಕಚೇರಿಯನ್ನು ಉದ್ಘಾಟಿಸಲಿದ್ದಾರೆ. ಮಾಜಿ ಸಚಿವ ಎಸ್. ಅಂಗಾರ ಭದ್ರತಾ ಕೊಠಡಿಯನ್ನು ಉದ್ಘಾಟಿಸಲಿದ್ದಾರೆ. ಎಂ.ಎಸ್.ಸಿ. ಯೋಜನೆಯಲ್ಲಿ ನಿರ್ಮಾಣಗೊಂಡ ಗೋದಾಮನ್ನು ದ.ಕ ಜಿಲ್ಲಾ ಸಹಕಾರಿ ಸಂಘದ ನಿರ್ದೇಶಕರಾದ ಶಶಿಕುಮಾರ್ ರೈ ಬಾಲ್ಯೊಟ್ಟು ಮಾಡಲಿದ್ದಾರೆ. ಸಭಾಭವನವನ್ನು ದ.ಕ. ಜಿಲ್ಲಾ ಸಹಕಾರಿ ಸಂಘದ ನಿರ್ದೇಶಕರಾದ ಎಸ್.ಎನ್ ಮನ್ಮಥ ಉದ್ಘಾಟಿಸಲಿದ್ದಾರೆ.


ಮುಖ್ಯ ಅತಿಥಿಗಳಾಗಿ ಉಬರಡ್ಕ ಮಿತ್ತೂರು ಗ್ರಾ.ಪಂ ಅಧ್ಯಕ್ಷೆ ಶ್ರೀಮತಿ ಪೂರ್ಣಿಮಾ ಸೂಂತೋಡು, ಸುಳ್ಯ ಟಿ.ಎ.ಪಿ.ಸಿ.ಎಂ.ಎಸ್ ನ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ದ.ಕ ಜೇನು ವ್ಯವಸಾಯಗಾರರ ಸಹಕಾರಿ ಸಂಘ ನಿ. ಪುತ್ತೂರು ಇದರ ಅಧ್ಯಕ್ಷ ಚಂದ್ರಾ ಕೋಲ್ಚಾರ್, ಸಹಕಾರ ಸಂಘಗಳ ಉಪನಿಬಂಧಕರಾದ ಹೆಚ್.ಎನ್.ರಮೇಶ, ದ.ಕ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಪ್ರಸಾದ್ ಕೌಶಲ್ ಶೆಟ್ಟಿ ಬೆಳ್ಳಿಪ್ಪಾಡಿ, ತಾಲೂಕು ಸಹಕಾರಿ ಯೂನಿಯನ್ ಅಧ್ಯಕ್ಷ ರಮೇಶ್ ದೇಲಂಪಾಡಿ, ಸಹಕಾರ ಸಂಘಗಳ ಸಹಾಯಕ ನಿಬಂಧಕರಾದ ಶ್ರೀಮತಿ ತ್ರಿವೇಣಿ ರಾವ್, ಮಿತ್ತೂರು ಜೋಡುದೈವಗಳ ಆಡಳಿತ ಮೊಕ್ತೇಸರರಾದ ವೆಂಕಟ್ರಮಣ ಕೆದಂಬಾಡಿ, ಉಬರಡ್ಕ ಮಿತ್ತೂರು ಶ್ರೀ ನರಸಿಂಹ ಶಾಸ್ತಾವು ದೇವಾಲಯದ ನಿಕಟಪೂರ್ವ ಅಧ್ಯಕ್ಷರಾದ ರತ್ನಾಕರ ಗೌಡ ಬಳ್ಳಡ್ಕ ಭಾಗವಹಿಸಲಿದ್ದಾರೆ.
ಸಂಜೆ ಸಾಂಸ್ಕೃತಿಕ ವೈಭವ, ಸ್ಕಂದ ಮೆಲೋಡಿಸ್ ಮಂಗಳೂರು ಇವರಿಂದ ಸಂಗೀತ ರಸಮಂಜರಿ, ನಂತರ ರಾತ್ರಿ ೭.೦೦ ಗಂಟೆಗೆ ಚಾ ಪರ್ಕ ಕಲಾವಿದರಿಂದ ಕಾಪಿಕಾಡ್, ಬೋಳಾರ್, ವಾಮಂಜೂರು ಅಭಿನಯದ ‘ನಾಯಿದ ಬೀಲ’ ನಾಟಕ ನಡೆಯಲಿದೆ.