ಸಿಡಿಲು ಬಡಿದು ನವ ವಿವಾಹಿತ ಮೃತ್ಯು

0

ಸುಬ್ರಹ್ಮಣ್ಯದ ಪರ್ವತಮುಖಿ ಬಳಿ ನಡೆದ ದುರ್ಘಟನೆ

ಸಿಡಿಲು ಬಡಿದು ಯುವಕನೋರ್ವ ಮೃತಪಟ್ಟ ದಾರುಣ ಘಟನೆ ಸುಬ್ರಹ್ಮಣ್ಯದಿಂದ ವರದಿಯಾಗಿದೆ.

ಇಂದು ಸಂಜೆ ಸಂಭವಿಸಿದ ಘಟನೆ ಇದಾಗಿದ್ದು‌ಸುಬ್ರಹ್ಮಣ್ಯ ಗ್ರಾಮದ ಪರ್ವತಮುಖಿ ನಿವಾಸಿ ಸೋಮಸುಂದರ್ ಮೃತ ಪಟ್ಟವರು. ಅವರಿಗೆ 34 ವರ್ಷವಾಗಿತ್ತು.

ಸಂಜೆ ಸುಬ್ರಹ್ಮಣ್ಯ ಪರಿಸರದಲ್ಲಿ ಮಳೆ ಆರಂಭಕ್ಕೂ ಮೊದಲು ಗಾಳಿ, ಗುಡುಗು ಆರಂಭಗೊಂಡಿದ್ದು ಈ ವೇಳೆ ಮನೆಯಂಗಳದಲ್ಲಿ ಒಣಗಿಸಲು ಹಾಕಲಾಗಿದ್ದ ಅಡಿಕೆಯನ್ನು ಸೋಮಸುಂದರ್ ಅವರು ರಾಶಿ ಮಾಡುವ ವೇಳೆ ಸಿಡಿಲು ಬಡಿದಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ದರೂ ಆ ವೇಳೆಗಾಗಲೇ ಅವರು ಮೃತರಾಗಿದ್ದಾರೆ. ಸೋಮ ಸುಂದರ್ ಅವರು ಸುಬ್ರಹ್ಮಣ್ಯ ಸಮೀಪ ಕಾರ್ ವಾಷಿಂಗ್ ಉದ್ಯಮ ನಡೆಸಿಕೊಂಡಿದ್ದು, 1೦ ದಿನಗಳ ಹಿಂದೆಯಷ್ಟೇ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಮೃತರು ತಾಯಿ, ತಂಗಿ, ಪತ್ನಿಯನ್ನು ಅಗಲಿದ್ದಾರೆ.