ಮೇ. 09ರಂದು ಗುರುವಾರ ಮೆಸ್ಕಾಂ ಸುಳ್ಯ ಉಪವಿಭಾಗ ವ್ಯಾಪ್ತಿಯಲ್ಲಿ ಸುಳ್ಯ 110ಕೆ.ವಿ ವಿದ್ಯುತ್ ವಿತರಣಾ ಕೇಂದ್ರದ ಕಾಮಗಾರಿಗಳಿಗೆ ಸಂಬಂಧಿಸಿದಂತೆ 33/11ಕೆ.ವಿ ಸುಳ್ಯ ವಿದ್ಯುತ್ ವಿತರಣಾ ಕೇಂದ್ರ ಹಾಗೂ ಸುಳ್ಯ ಉಪವಿಭಾಗದ ಆವರಣದಿಂದ ವಿತರಣಾ ಪರಿವರ್ತಕಗಳನ್ನು ಸ್ಥಳಾಂತರಿಸುವ ಕಾಮಗಾರಿಗಳನ್ನು ಹಮ್ಮಿಕೊಂಡಿರುವುದರಿಂದ 11ಕೆ.ವಿ ಸುಳ್ಯ-1 ಕೇರ್ಪಳ, ಸುಳ್ಯ-2 ಶ್ರೀರಾಂಪೇಟೆ, ಜಬಳೆ, ಡಿಪ್ಲೊ, ತೋಡಿಕಾನ, ಕೊಲ್ದಾರ್, ದೇವರಗುಂಡ, ಅಜ್ಜಾವಾರ, ಉಬರಡ್ಕ, ಕಲ್ಲುಗುಂಡಿ, ಮಂಡೆಕೋಲು ಪೀಡರುಗಳಲ್ಲಿ ಬೆಳಿಗ್ಗೆ 10:00 ರಿಂದ ಸಾಯಂಕಾಲ 6:00 ರ ತನಕ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು ಗ್ರಾಹಕರು ಸಹಕರಿಸಬೇಕಾಗಿ ಮೆಸ್ಕಾಂ ಅಧಿಕಾರಿಗಳು ತಿಳಿಸಿದ್ದಾರೆ.