ಇಲಾಖೆಯ ಸೂಚನೆಯನ್ನು ಪಾಲಿಸುವಂತೆ ಸುಳ್ಯ ಪೊಲೀಸ್ ಮನವಿ ತಪ್ಪಿದ್ದಲ್ಲಿ ಕ್ರಮ ಕೈಗೊಳ್ಳುವ ಎಚ್ಚರಿಕೆ
ಸುಳ್ಯ ನಗರದ ಮುಖ್ಯ ರಸ್ತೆಯಲ್ಲಿ ವಾಹನ ಸವಾರರು ರಸ್ತೆಯ ಎರಡೂ ಬದಿಗಳಲ್ಲಿ ತಮ್ಮ ತಮ್ಮ ವಾಹನಗಳನ್ನು ನಿಲುಗಡೆ ಮಾಡುತ್ತಿದ್ದು ಇದರಿಂದ ಇತರ ವಾಹನ ಸಂಚಾರರಿಗೆ, ಪಾದಾಚಾರಿಗಳಿಗೆ ಸಮಸ್ಯೆ ಉಂಟು ಮಾಡುತ್ತಿದೆ.
ಈ ಹಿನ್ನಲೆಯಲ್ಲಿ ಸುಳ್ಯದ ಮುಖ್ಯಪೇಟೆಯ ಅಂಗಡಿಗಳ ಮಾಲಕರು ತಮ್ಮ ತಮ್ಮ ಅಂಗಡಿಗಳನ್ನು ಮುಂಭಾಗದಲ್ಲಿ ಒಂದು ದಿನ ಬಿಟ್ಟು ಮತ್ತೊಂದು ದಿನ ನೋ ಪಾರ್ಕಿಂಗ್ ಬೋರ್ಡ್ ಅಳವಡಿಸುವ ಮೂಲಕ ಸಹಕಾರವನ್ನು ನೀಡುತ್ತಿದ್ದರು.
ಆದರೆ ಕೆಲವು ವಾಹನ ಸವಾರರು ಈ ಬೋರ್ಡಿನ ಬದಿಯಲ್ಲಿ ವಾಹನಗಳನ್ನು ನಿಲ್ಲಿಸುವ ಕಾರಣ ನಗರದಲ್ಲಿ ವಾಹನ ದಟ್ಟಣೆ ಉಂಟಾಗುತ್ತಿದೆ. ಆದ್ದರಿಂದ ಈ ರೀತಿ ರಸ್ತೆಗಳಲ್ಲಿ ವಾಹನ ನಿಲುಗಡೆ ಮಾಡುವವರು ಇಲಾಖೆಯ ನಿಯಮವನ್ನು ಪಾಲಿಸಿ ಸಹಕರಿಸುವಂತೆ ಸುಳ್ಯ ಪೊಲೀಸರು ಮನವಿ ಮಾಡಿದ್ದಾರೆ.
ತಪ್ಪಿದ್ದಲ್ಲಿ ಅಂತಹ ವಾಹನಗಳ ಚಾಲಕರಿಗೆ ಇಲಾಖೆ ವತಿಯಿಂದ ಕ್ರಮ ಕೈಗೊಳ್ಳುವುದಾಗಿ ಪತ್ರಿಕಾ ಪ್ರಕಟಣೆಯ ಮೂಲಕ ಎಚ್ಚರಿಕೆಯನ್ನು ನೀಡಿದ್ದಾರೆ.