ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ, ಇತ್ತೀಚೆಗೆ ನಿಧನರಾದ ಜಾನಪದ ವಿದ್ವಾಂಸ, ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಡಾ. ಪಾಲ್ತಾಡಿ ರಾಮಕೃಷ್ಣ ಆಚಾರ್ ರವರಿಗೆ ನುಡಿನಮನ ಕಾರ್ಯಕ್ರಮ ಕನ್ನಡ ಭವನದಲ್ಲಿ ನಡೆಯಿತು.
ಕಸಾಪ ತಾಲೂಕು ಘಟಕದ ಅಧ್ಯಕ್ಷ ಚಂದ್ರಶೇಖರ ಪೇರಾಲು ಅಧ್ಯಕ್ಷತೆ ವಹಿಸಿದ್ದರು.
ನಿವೃತ್ತ ವೈದ್ಯಾಧಿಕಾರಿ ಡಾ.ಎಸ್.ರಂಗಯ್ಯ, ಕಸಾಪ ಪಂಜ ಹೋಬಳಿ ಘಟಕದ ಅಧ್ಯಕ್ಷ ಬಾಬು ಗೌಡ ಅಚ್ರಪ್ಪಾಡಿ, ನಿವೃತ್ತ ಪ್ರಾಂಶುಪಾಲೆ ಡಾ.ರೇವತಿ ನಂದನ್ ರವರು ಪಾಲ್ತಾಡಿಯವರು ತುಳು ಮತ್ತು ಕನ್ನಡ ಸಾಹಿತ್ಯಕ್ಕೆ ನೀಡಿದ ಕೊಡುಗೆಯನ್ನು ಸ್ಮರಿಸಿದರು. ಅವರ ಸಾಹಿತ್ಯ ಸಾಧನೆಗೆ ದೊಡ್ಡ ಪ್ರಶಸ್ತಿ ಸಿಗಬೇಕಿತ್ತು ಎಂದು ಹೇಳಿದರು.
ಕಸಾಪ ಸುಳ್ಯ ಹೋಬಳಿ ಘಟಕದ ಅಧ್ಯಕ್ಷೆ ಚಂದ್ರಾವತಿ ಬಡ್ಡಡ್ಕ, ಕಸಾಪ ಗೌರವ ಕೋಶಾಧಿಕಾರಿ ದಯಾನಂದ ಆಳ್ವ, ನಿರ್ದೇಶಕರುಗಳಾದ ಯೋಗಿಶ್ ಹೊಸೊಳಿಕೆ, ರಮೇಶ್ ನೀರಬಿದಿರೆ, ಲತಾಶ್ರೀ ಸುಪ್ರೀತ್ ಮೋಂಟಡ್ಕ, ಸಾವಿತ್ರಿ ಕಣೆಮರಡ್ಕ ಉಪಸ್ಥಿತರಿದ್ದರು.
ಕಸಾಪ ಗೌರವ ಕಾರ್ಯದರ್ಶಿಗಳಾದ ತೇಜಸ್ವಿ ಕಡಪಳ ಸ್ವಾಗತಿಸಿ, ಚಂದ್ರಮತಿ ಕೆ.ವಂದಿಸಿದರು.