🔶 ಧಾರ್ಮಿಕತೆ ಮೈಗೂಡಿಸಿ ಕೊಳ್ಳಲು ಭಜನೆ ಪೂರಕ
ಶ್ರೀ ಶಾರದಾಂಬ ಭಜನಾ ಮಂಡಳಿ ಪಂಜ ,ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿಯೋಜನೆ ಬಿ ಸಿ ಟ್ರಸ್ಟ್, ಸುಳ್ಯ ತಾಲೂಕು, ಪಂಜ ಮತ್ತು ನಿಂತಿಕಲ್ಲು ವಲಯ ಶ್ರೀ ಕ್ಷೇತ್ರ ಧರ್ಮಸ್ಥಳ ಭಜನಾ ಪರಿಷತ್ ಸುಳ್ಯ ತಾಲೂಕು ಇದರ ಆಶ್ರಯದಲ್ಲಿ 15ನೇ ವರ್ಷದ ಭಜನಾ ತರಬೇತಿ ಶಿಬಿರವು ಮೇ.11 ಸಮಾರೋಪ ಸಮಾರಂಭ ನಡೆಯಿತು.
ಶ್ರೀ ಕ್ಷೇತ್ರ ಮಾಣಿಲ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ರವರು ಆಶೀರ್ವಚನ ನೀಡಿ “ಭಜನೆಯಿಂದ ಎಲ್ಲರನ್ನು ಒಂದಾಗಿರುತ್ತದೆ . ಶ್ರೀ ದೇವರ ಅನುಗ್ರಹ ಪ್ರಾಪ್ತಿಯಾಗುತ್ತದೆ. ಈ ಮೂಲಕ ಧಾರ್ಮಿಕತೆ ಮೈಗೂಡುವುದು. ಮಾನವೀಯ ಮೌಲ್ಯ ವೃದ್ಧಿಯಾಗುತ್ತದೆ’.ಎಂದು ಅವರು ಹೇಳಿದರು.
ಮುಖ್ಯ ಅತಿಥಿ ಪಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕ ಚಂದ್ರಶೇಖರ ಶಾಸ್ತ್ರಿ ದೀಪ ಬೆಳಗಿಸಿದರು.
ಭಜನೋತ್ಸವ ಸಮಿತಿ ಅಧ್ಯಕ್ಷ ರಾಜ ಕುಮಾರ್ ಬೇರ್ಯ ಸಭಾಧ್ಯಕ್ಷತೆ ವಹಿಸಿದ್ದರು.ಮುಖ್ಯ ಅತಿಥಿಗಳಾಗಿ ಎಸ್ ಸಿ ಡಿ ಸಿ ಸಿ ಬ್ಯಾಂಕ್ ನ ನಿರ್ದೇಶಕ ಎಸ್ ಎನ್ ಮನ್ಮಥ, ಪಂಜ ಲಯನ್ಸ್ ಕ್ಲಬ್ ಅಧ್ಯಕ್ಷ ದಿಲೀಪ್ ಬಾಬ್ಲುಬೆಟ್ಟು, ಪಂಬೆತ್ತಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಮಾಧವ ಗೌಡ ಜಾಕೆ,ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪಂಜ ವಲಯ ಮೇಲ್ವಿಚಾರಕಿ ಶ್ರೀಮತಿ ಕಲಾವತಿ, ಪಂಜ ಪಂಚಶ್ರೀ ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷ ಪವನ್ ಪಲ್ಲತ್ತಡ್ಕ, ಶ್ರೀ ಕ್ಷೇತ್ರ ಒಡಿಯೂರು ಗ್ರಾಮ ವಿಕಾಸ ಯೋಜನೆ ಪಂಜ ವಲಯ ಸಂಯೋಜಕಿ ಶ್ರೀಮತಿ ಜಯಶ್ರೀ , ಶ್ರೀ ಕ್ಷೇತ್ರ ಧರ್ಮಸ್ಥಳ ಭಜನಾ ಪರಿಷತ್ ಜಿಲ್ಲಾ ಸಮನ್ವಯಧಿಕಾರಿ ಸಂತೋಷ್,ಪಂಬೆತ್ತಾಡಿ ಪಂಚಶ್ರೀ ಯುವಕ ಮಂಡಲದ ಅಧ್ಯಕ್ಷ ನಾಗಪ್ಪ ಗೌಡ ಪಂಜದಬೈಲು, ಭಜನೋತ್ಸವ ಸಮಿತಿ ನಿಕಟಪೂರ್ವಾಧ್ಯಕ್ಷ ಕುಸುಮಾಧರ ಕೆಮ್ಮೂರು, ಕಾರ್ಯದರ್ಶಿ ದಿನೇಶ್ ಪಂಜದಬೈಲು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಇದೇ ವೇಳೆ ಎಸ್ ಸಿ ಡಿ ಸಿ ಸಿ ಬ್ಯಾಂಕ್ ನಿರ್ದೇಶಕ ಎಸ್ ಎನ್ ಮನ್ಮಥ ರವರನ್ನು ಸನ್ಮಾನಿಸಿದರು.
ಭಜನಾ ತರಬೇತಿ ಪಡೆದ ವಿದ್ಯಾರ್ಥಿಗಳಿಂದ ಮತ್ತು ಭಜನಾ ಭಜನಾ ತಂಡಗಳಿಂದ ಭಜನಾ ಕಾರ್ಯಕ್ರಮ ನಡೆಯಿತು.ಮಾಣಿಲ ಸ್ವಾಮಿಜಿ ಯವರ ಆಶೀರ್ವಚನ ಮುಗಿದಾಗ ವರುಣ ಆಗನ ಆಯಿತು. ಬಳಿಕ ಕಾರ್ಯಕ್ರಮ ಸಂಪನ್ನಗೊಂಡಿತು.
ಕಾರ್ಯಕ್ರಮದಲ್ಲಿ ಭಜನಾ ಮಂಡಳಿ ಕಾರ್ಯದರ್ಶಿ ಗುರುಪ್ರಸಾದ್ ತೋಟ ಸ್ವಾಗತಿಸಿದರು. ತರಬೇತುದಾರರಾದ ಶ್ರೀಮತಿ ನಳಿನಾಕ್ಷಿ ವಿ ಆಚಾರ್ಯ ಕಲ್ಮಡ್ಕ ಪ್ರಾಸ್ತಾವಿಕಗೈದರು.ಸೋಮಶೇಖರ ನೇರಳ ನಿರೂಪಿಸಿದರು. ಭಜನಾ ಮಂಡಳಿ ಅಧ್ಯಕ್ಷ ಬಾಲಕೃಷ್ಣ ಪುತ್ಯ ಕಾರ್ಯಕ್ರಮದಲ್ಲಿ ಸಹಕರಿಸಿದರು.