ರಾಜ್ಯ ಮಟ್ಟದ 17ರ ವಯೋಮಿತಿಯ ಬಾಲಕ ಮತ್ತು ಬಾಲಕಿಯರ Fide rated ಚೆಸ್ ಚಾಂಪಿಯನ್ ಶಿಪ್

0

ದಕ್ಷಿಣ ಕನ್ನಡ ಚೆಸ್ ಅಸೋಸಿಯೇಶನ್(ರಿ) ಈ ಬಾರಿ ರಾಜ್ಯ ಮಟ್ಟದ 17ರ ವಯೋಮಿತಿಯ Fide rating ಚೆಸ್ ಚಾಂಪಿಯನ್ ಶಿಪ್ ಪಂದ್ಯಾವಳಿಯನ್ನು 2024 ಮೇ 17 ರಿಂದ 19ರ ತನಕ ಮಂಗಳೂರು ಟೌನ್ ಹಾಲ್ (ಮಿನಿ) ಸಭಾಂಗಣದಲ್ಲಿ ಆಯೋಜಿಸಿದೆ.
ರಾಜ್ಯದ 17 ವರ್ಷ ವಯೋಮಿತಿ ಹಾಗೂ ಅದರ ಕೆಳಗಿನ ವಯೋಮಿತಿಯ ಯವರು ಈ ಸ್ಪರ್ಧೆಯಲ್ಲಿ ಭಾಗವಹಿಸಬಹುದಾಗಿದೆ. ವಿಜೇತರಿಗೆ ಒಟ್ಟು 1ಲಕ್ಷ ನಗದು ಬಹುಮಾನ ಹಾಗು ಟ್ರೋಫಿ ವಿತರಿಸಲಾಗುವುದು ಎಂದು ಚೆಸ್ ಅಸೋಸಿಯೇಶನ್ ಜಿಲ್ಲಾಧ್ಯಕ್ಷ ರಮೇಶ್ ಕೋಟೆ ತಿಳಿಸಿದ್ದಾರೆ.


ಬಾಲಕ ಮತ್ತು ಬಾಲಕಿಯರಿಗೆ ಪ್ರತ್ಯೇಕವಾಗಿ ಸ್ಪರ್ಧೆ ನಡೆಯಲಿದೆ.
ಬಾಲಕ ಮತ್ತು ಬಾಲಕಿಯರ ವಿಭಾಗದಲ್ಲಿ ವಿಜೇತರಾದ ಪ್ರಥಮ ಹಾಗೂ ದ್ವಿತೀಯ ಸ್ಥಾನಿಗಳಿಗೆ ರಾಷ್ಟ ಮಟ್ಟದಲ್ಲಿ ಆಡುವ ಅವಕಾಶ ಲಭಿಸಲಿದೆ.


ಸ್ಪರ್ಧೆಯಲ್ಲಿ ಭಾಗವಹಿಸುವವರು ಮುಂಚಿತವಾಗಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳುವುದು ಕಡ್ಡಾಯ. ನೋಂದಣಿಗೆ www.chessfee.com ಸಂಪರ್ಕಿಸಬಹುದು ಎಂದು ರಮೇಶ್ ಕೋಟೆ ತಿಳಿಸಿದ್ದಾರೆ.