ಸೈಂಟ್ ಜೋಸೆಫ್ ವಿದ್ಯಾಸಂಸ್ಥೆಯಲ್ಲಿ ಎಸ್‌ಎಸ್‌ಎಲ್‌ಸಿ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ

0


2023-24 ನೇ ಸಾಲಿನ ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ಸುಳ್ಯದ ಸೈಂಟ್ ಜೋಸೆಫ್ ವಿದ್ಯಾರ್ಥಿಗಳು ಉತ್ತಮ ಅಂಕ ಗಳಿಸಿದ್ದು, ಸಾಧಕ ಮೂವರು ವಿದ್ಯಾರ್ಥಿಗಳಿಗೆ ಅಭಿನಂದನೆ ಹಾಗೂ ಸನ್ಮಾನ ಕಾರ್ಯಕ್ರಮ ಮೇ. 13 ರಂದು ಶಾಲಾ ಸಭಾಂಗಣದಲ್ಲಿ ನಡೆಯಿತು.

ಶಾಲೆಗೆ ಪ್ರಥಮ ಸ್ಥಾನ ಹಾಗೂ ತಾಲೂಕಿಗೆ ದ್ವಿತೀಯ ಸ್ಥಾನ ಪಡೆದ ಆಯುಷ್ ರಾವ್ (619 ಅಂಕ), ಶಾಲೆಗೆ ದ್ವಿತೀಯ ಸ್ಥಾನ ಪಡೆದ ಸಮನ್ಯು ಎಸ್.ಶೆಟ್ಟಿ (616 ಅಂಕ) ಹಾಗೂ ತೃತೀಯ ಸ್ಥಾನ ಪಡೆದ ಸುಗುಣ ಎಸ್. (615 ಅಂಕ) ಇವರನ್ನು ಶಾಲಾ ಸಂಚಾಲಕ ಪಾ| ವಿಕ್ಟರ್ ಡಿಸೋಜಾರವರು ಸನ್ಮಾನಿಸಿ ಅಭಿನಂದನಾ ಮಾತುಗಳನ್ನಾಡಿ, ಶುಭ ಹಾರೈಸಿದರು.


ವೇದಿಕೆಯಲ್ಲಿ ಶಾಲಾ ಮುಖ್ಯೋಪಾಧ್ಯಾಯಿನಿ ಸಿ| ಬಿನೋಮಾ, ಚರ್ಚ್ ಪಾಲನಾ ಸಮಿತಿ ಉಪಾಧ್ಯಕ್ಷ ನವೀನ್ ಮಚಾದೋ, ಪ್ರೌಢಶಾಲಾ ಶಿಕ್ಷಕ -ರಕ್ಷಕ ಸಂಘದ ಅಧ್ಯಕ್ಷ ಬಿ.ಜಿ. ಗುರುಸ್ವಾಮಿ , ಪ್ರಾಥಮಿಕ ಶಾಲಾ ವಿಭಾಗದ ಶಿಕ್ಷಕ -ರಕ್ಷಕ ಸಂಘದ ಅಧ್ಯಕ್ಷ ಜೆ.ಕೆ.ರೈ ಉಪಸ್ಥಿತರಿದ್ದರು. ಶಿಕ್ಷಕಿ ಚೇತನಾ ಕಾರ್ಯಕ್ರಮ ನಿರೂಪಿಸಿದರು. ಪೋಷಕರು, ಶಿಕ್ಷಕರು, ಸಿಬ್ಬಂದಿಗಳು ಉಪಸ್ಥಿತರಿದ್ದರು.