ಅರಂಬೂರು ಬಸ್ಸು ತಂಗುದಾಣ ಬಳಿ ಅಪರಿಚಿತ ವ್ಯಕ್ತಿ ಮೃತ್ಯು, ಸುಳ್ಯ ಸರ್ಕಾರಿ ಆಸ್ಪತ್ರೆಗೆ ರವಾನೆ

0

ಅರಂಬೂರು ಮರದ ಡಿಪೋ ಬಳಿಯ ಬಸ್ಸು ತಂಗುದಾಣದ ಬಳಿ ಅಪರಿಚಿತ ವ್ಯಕ್ತಿ ಮೃತಪಟ್ಟಿದ್ದು
ಮೃತ ದೇಹವನ್ನು ಅಚ್ಚು ಪ್ರಗತಿಯವರ ಆಂಬುಲೆನ್ಸ್ ನಲ್ಲಿ ಸುಳ್ಯ ಸರ್ಕಾರಿ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ ಎಂದು ತಿಳಿದುಬಂದಿದೆ.

ಮೃತ ವ್ಯಕ್ತಿ ಕಳೆದ ಕೆಲವು ದಿನಗಳಿಂದ ಬಸ್ಸು ತಂಗುದಾಣ ದಲ್ಲಿಯೇ ಇರುತ್ತಿದ್ದರು ಎನ್ನಲಾಗಿದೆ.
ವಾರಿಸುದಾರರು ಯಾರಾದರೂ ಇದ್ದಲ್ಲಿ ಸುಳ್ಯ ಪೊಲೀಸ್ ಠಾಣೆ ಅಥವಾ ಸರ್ಕಾರಿ ಆಸ್ಪತ್ರೆಗೆ ಸಂಪರ್ಕಿಸುವಂತೆ ಸಂಬಂಧಪಟ್ಟವರು ಮಾಹಿತಿ ನೀಡಿದ್ದಾರೆ.