ಕೆ.ವಿ.ಜಿ. ಇಂಟರ್ ನ್ಯಾಶನಲ್ ಪಬ್ಲಿಕ್ ಸ್ಕೂಲ್ ಗೆ ಶೇ. 100 ಫಲಿತಾಂಶ
ಅಂಶಿ ದೊಳ್ಪಾಡಿ ಶಾಲೆಗೆ ಪ್ರಥಮ
ಸಿ.ಬಿ.ಎಸ್.ಇ. ಪಠ್ಯಕ್ರಮದ ಸುಳ್ಯದ ಕೆ.ವಿ.ಜಿ. ಇಂಟರ್ ನ್ಯಾಶನಲ್ ಪಬ್ಲಿಕ್ ಸ್ಕೂಲ್ ಶೇ. 100 ಫಲಿತಾಂಶ ದಾಖಲಿಸಿದೆ. ಪರೀಕ್ಷೆಗೆ ಹಾಜರಾದ ಒಟ್ಟು 43 ವಿದ್ಯಾರ್ಥಿಗಳಲ್ಲಿ 43 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇ. 100 ಫಲಿತಾಂಶ ಲಭಿಸಿದೆ. ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನ ಪ್ರಾಧ್ಯಾಪಕಿ ಶ್ರೀಮತಿ ಸುರೇಖಾ ಮತ್ತು ಮಂಗಳೂರಿನ ಶ್ರೀದೇವಿ ಇಂಜಿನಿಯರಿಂಗ್ ಕಾಲೇಜಿನ ಪ್ರಾಧ್ಯಾಪಕರಾದ ಯಶವಂತ ದೋಳ್ಪಾಡಿ ದಂಪತಿಯ ಪುತ್ರಿ ಕು. ಅಂಶಿ 96.7% ಅಂಕಗಳೊಂದಿಗೆ ಶಾಲೆಗೆ ಪ್ರಥಮ ಸ್ಥಾನಿಯಾಗಿದ್ದಾರೆ.
ಪರೀಕ್ಷೆ ಬರೆದ 43 ವಿದ್ಯಾರ್ಥಿಗಳಲ್ಲಿ 32 ಮಂದಿ ಡಿಸ್ಟಿಂಕ್ಷನ್, 7 ಮಂದಿ ಪ್ರಥಮ ದರ್ಜೆ ಮತ್ತು ನಾಲ್ವರು ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ.