ಪೆರುವಾಜೆ ಡಾ. ಶಿವರಾಮ ಕಾರಂತ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ಹಗ್ಗಜಗ್ಗಾಟ ಪಂದ್ಯಾಟ

0

ಬೆಳ್ಳಾರೆಯ ಪೆರುವಾಜೆ ಡಾ.ಕೆ. ಶಿವರಾಮ ಕಾರಂತ ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ಪುರುಷ ಹಾಗೂ ಮಹಿಳೆಯರ ಹಗ್ಗ ಜಗ್ಗಾಟ ಸ್ಪರ್ಧೆಯು 2023-2024 ಮೇ.11ರಂದು ನಡೆಯಿತು.

ಬೆಳಿಗ್ಗೆ ನಡೆದ ಉದ್ಘಾಟನಾ ಸಮಾರಂಭದಲ್ಲಿ ಕಾಲೇಜಿನ ಪ್ರಾಂಶುಪಾಲ ಪ್ರೋ.ದಾಮೋದರ ಕಣಜಾಲು ಅವರು ಅಧ್ಯಕ್ಷತೆ ವಹಿಸಿದ್ದರು.
ಪಂದ್ಯಾಟವನ್ನು ಬೆಳ್ಳಾರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಶ್ರೀರಾಮ ಪಾಟಾಜೆ ಅವರು ಉದ್ಘಾಟಿಸಿ, ಎಲ್ಲಾ ಸ್ಪರ್ಧಾಳುಗಳು ಕ್ರೀಡಾ ಸ್ಪೂರ್ತಿಯಿಂದ ಭಾಗವಹಿಸುವಂತೆ ಕರೆ ನೀಡಿದರು.
ಮುಖ್ಯ ಅತಿಥಿಗಳಾಗಿ ಉದ್ಯಮಿಗಳಾದ ಮಾಧವ ಗೌಡ ಕಾಮದೇನು, ಮಿಥುನ್ ಶೆಣೈ ಬೆಳ್ಳಾರೆ, ಮಂಗಳೂರು ವಿಶ್ವವಿದ್ಯಾನಿಲಯ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕರಾದ ಡಾ. ಜೆರಾಲ್ಡ್ ಸಂತೋಷ್ ಡಿ ಸೋಜ ಹಾಗೂ ಕಾಲೇಜಿನ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ರವಿಕುಮಾರ್ ಕಿರಿಭಾಗ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು.

ಕಾಲೇಜಿನ ಕ್ರೀಡಾ ಕಾರ್ಯದರ್ಶಿ ಅಂತಿಮ ಬಿ.ಎಸ್ .ಡಬ್ಲ್ಯೂ. ವಿದ್ಯಾರ್ಥಿನಿ ಕು.ನೀಶ್ಮಾ ಕಾರ್ಯಕ್ರಮ ನಿರ್ವಹಿಸಿದರು.

ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಡಾ.ರಾಮಚಂದ್ರ ಕೆ. ಸ್ವಾಗತಿಸಿ, ಪ್ರಥಮ ಬಿ.ಕಾಂ. ವಿದ್ಯಾರ್ಥಿನಿ ಕು.ಶ್ರಾವ್ಯ ವಂದಿಸಿದರು.

ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ಕಾಲೇಜಿನ ಪ್ರಾಂಶುಪಾಲ ಪ್ರೋ.ದಾಮೋದರ ಕಣಜಾಲು ಅವರು ಅಧ್ಯಕ್ಷತೆ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಮುಕ್ಕೂರು ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ದಯಾಕರ ಆಳ್ವ, ಬೆಳ್ಳಾರೆ ಜೆಸಿಐ ಅಧ್ಯಕ್ಷ ಜೆಸಿ ಜಗದೀಶ ರೈ ಪೆರುವಾಜೆ ಮತ್ತು ಉದ್ಯಮಿಗಳು ಹಾಗೂ ಬೆಳ್ಳಾರೆ ZJM ಅಧ್ಯಕ್ಷ ಯು.ಎಚ್ ಅಬೂಬಕ್ಕರ್, ಅವರುಗಳು ಭಾಗವಹಿಸಿದ್ದರು. ದ್ವಿತೀಯ ಎಂ.ಕಾಂ. ಪದವಿ ವಿದ್ಯಾರ್ಥಿನಿ ಕು.ಸೃಷ್ಟಿಕಾ ಕಾರ್ಯಕ್ರಮ ನಿರ್ವಹಿಸಿದರು.
ದ್ವಿತೀಯ ಎಂ.ಕಾಂ. ವಿದ್ಯಾರ್ಥಿನಿ ಪವಿತ್ರ ಸ್ವಾಗತಿಸಿದರು.ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶ ಡಾ.ರಾಮಚಂದ್ರ ಕೆ ವಂದಿಸಿದರು.

ಪುರುಷ ಮತ್ತು ಮಹಿಳಾ ವಿಭಾಗದಲ್ಲಿ ಒಟ್ಟು 30 ತಂಡಗಳು ಹಗ್ಗಜಗ್ಗಾಟ ಪಂದ್ಯಾವಳಿಯಲ್ಲಿ ಭಾಗವಹಿಸಿದ್ದರು. ಪುರುಷರ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಆಳ್ವಾಸ್ ಕಾಲೇಜು ಮೂಡಬಿದಿರೆ, ದ್ವಿತೀಯ ಸ್ಥಾನವನ್ನು ಉಡುಪಿಯ ಸರಕಾರಿ ಪ್ರಥಮ ದರ್ಜೆ ಕಾಲೇಜು ತೆಂಕನೆಡಿಯೂರು ತೃತೀಯ ಸ್ಥಾನವನ್ನು ಸರಕಾರಿ ಪ್ರಥಮ ದರ್ಜೆ ಕಾಲೇಜು ಸುಳ್ಯ ಹಾಗೂ ಚತುರ್ಥ ಸ್ಥಾನವನ್ನು ಕೆ.ಎಸ್ ಎಸ್ ಕಾಲೇಜು ಸುಬ್ರಹ್ಮಣ್ಯ ತಂಡಗಳು ಪಡೆದುಕೊಂಡವು.

ಮಹಿಳಾ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಡಾ.ಜಿ ಶಂಕರ್ ಸರಕಾರಿ ಮಹಿಳಾ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಉಡುಪಿ, ದ್ವಿತೀಯ ಸ್ಥಾನವನ್ನು ಸರಕಾರಿ ಪಥಮ ದರ್ಜೆ ಕಾಲೇಜು ಸುಳ್ಯ, ತೃತೀಯ ಸ್ಥಾನವನ್ನು ಸರಕಾರಿ ಪ್ರಥಮ ದರ್ಜೆ ಕಾಲೇಜು ವಾಮದಪದವು ಹಾಗೂ ಚತುರ್ಥ ಸ್ಥಾನವನ್ನು ಸರಕಾರಿ ಪ್ರಥಮ ದರ್ಜೆ ಕಾಲೇಜು ವಿಟ್ಲ ತಂಡಗಳು ಪಡೆದುಕೊಂಡವು.
ಉದ್ಯಮಿಗಳಾದ ಮಾಧವ ಗೌಡ, ಯು.ಎಚ್ ಅಬೂಬಕ್ಕರ್ ಹಾಗೂ ಅಧ್ಯಕ್ಷರು ಮತ್ತು ಸದಸ್ಯರು ಜೆಸಿಐ ಬೆಳ್ಳಾರೆ ಹಗ್ಗಜಗ್ಗಾಟ ಸ್ಪರ್ಧೆಯ ಟ್ರೋಪಿಗಳ ಪ್ರಾಯೋಜಕರಾಗಿ ಸಹಕರಿಸಿದರು.