ಸುಬ್ರಹ್ಮಣ್ಯ ಪ್ರಾಥಮಿಕ ಅರೋಗ್ಯ ಕೇಂದ್ರಕ್ಕೆ ಹೆಚ್ಚುವರಿ ವೈದ್ಯರನ್ನು ನೇಮಿಸುತ್ತೇವೆ

0

ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಭರವಸೆ

ಮಳೆಗಾಲದಲ್ಲಿ ಸಂಭವಿಸಬಹುದಾದ ವಿಪತ್ತುಗಳ ಬಗ್ಗೆ, ಪರಿಶೀಲನೆ ನಡೆಸಿದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳು
ಹಾಗೂ ಪುತ್ತೂರು ಉಪವಿಭಾಗ ಸಹಾಯಕ ಆಯುಕ್ತ ಜುಬಿನ್ ಮೊಹಪಾತ್ರ ಅ

ವರು ಸಾರ್ವಜನಿಕರ ಹಾಗೂ ಮಾಧ್ಯಮದವರ ಮನವಿಗೆ ಮೇರೆಗೆ ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಮೇ.16 ರ ಸಂಜೆ ಭೇಟಿ ನೀಡಿದರು.
ಜಿಲ್ಲಾಧಿಕಾರಿ ಗಳು ಭೇಟಿ ಸಂದರ್ಭದಲ್ಲಿ ಆಸ್ಪತ್ರೆ ಕೆಲಸದ ಅವಧಿ ಮುಗಿದು ಬಾಗಿಲು ಮುಚ್ಚಲಾಗಿತ್ತು. ಈ ವೇಳೆ
ಅಶೋಕ್ ನೆಕ್ರಾಜೆ ಹಾಗೂ ಸುಬ್ರಹ್ಮಣ್ಯ ಗ್ರಾಂ. ಉಪಾಧ್ಯಕ್ಷ ವೆಂಕಟೇಶ್ ಹೆಚ್. ಎಲ್ ಹಾಗೂ ಮಾದ್ಯಮದವರು ಕುಕ್ಕೆ ಸುಬ್ರಹ್ಮಣ್ಯಕ್ಕೆ ವೈದ್ಯರ ಅಗತ್ಯವಿದೆ,ರಾತ್ರಿ ಹಗಲು ಎಲ್ಲಾ ಸಮಯದಲ್ಲೂ ಆಸ್ಪತ್ರೆ ತೆರೆದಿರಬೇಕು ವೈದ್ಯರು ಹಾಗೂ ಸಿಬ್ಬಂದಿಗಳನ್ನು ನೀಡಬೇಕು ಎಂದು ಮನವಿಯನ್ನು ಮಾಡಿದರು.

ಇದಕ್ಕೆ ಪ್ರತಿಕ್ರಿಯೆ ನೀಡಿದ ಜಿಲ್ಲಾಧಿಕಾರಿ
ಹೆಚ್ಚುವರಿ ವೈದ್ಯರನ್ನು, ಸಿಬಂಧಿಗಳನ್ನು ನೇಮಿಸುತ್ತೇವೆ ಎಂದು ಭರವಸೆ ನೀಡಿದರು.


ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಡಾ.ನಿಂಗಯ್ಯ
ಸುಳ್ಯ ತಹಶಿಲ್ದಾರ್ ಮಂಜುನಾಥ ಜಿ., ಕಡಬ ತಹಶಿಲ್ದಾರ್ ಪ್ರಭಾಕರ ಕಜೂರೆ, ಪುತ್ತೂರು ತಹಶಿಲ್ದಾರ್ ಕುಂಞಿ ಅಹ್ಮದ್, ಬೆಳ್ತಂಗಡಿ ತಹಶಿಲ್ದಾರ್ ಪೃಥ್ವಿ ಸಾನಿಕಮ್, ಕಡಬ ಕಂದಾಯ ನಿರೀಕ್ಷಕ ಪೃಥ್ವಿಕುಮಾರ್, ಪಂಜ ಕಂದಾಯ ನಿರೀಕ್ಷಕ ರಂಜನ್ ಕಲ್ಕುದಿ, ಕಡಬ ಉಪ ತಹಶಿಲ್ದಾರ್ ಮನೋಹರ್ ಕೆ.ಟಿ. ,

ಸುಳ್ಯ ನ.ಪಂ. ಮುಖ್ಯಾಧಿಕಾರಿ ಬಿ.ಎಂ.ಡಾಂಗೆ, ಸುಬ್ರಹ್ಮಣ್ಯ ಗ್ರಾ.ಪಂ. ಕಾರ್ಯದರ್ಶಿ ಮೋನಪ್ಪ ಸೇರಿದಂತೆ ಪುತ್ತೂರು ಉಪವಿಭಾಗ ವ್ಯಾಪ್ತಿಯ ನಾಲ್ಕು ತಾಲೂಕುಗಳ ಅಧಿಕಾರಿಗಳು ಉಪಸ್ಥಿತರಿದ್ದರು.