ನೈಋತ್ಯ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ಚುನಾವಣೆ ಜೂ.3 ರಂದು ನಡೆಯಲಿದ್ದು, ಶಿಕ್ಷಕರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಡಾ.ನರೇಶ್ಚಂದ್ ಹೆಗ್ಡೆ ಹೆಬ್ರಿಬೀಡು ಇಂದು ಸುಳ್ಯಕ್ಕೆ ಭೇಟಿ ನೀಡಿದರು.
ಮೈಸೂರಿನಲ್ಲಿ ನಾಮಪತ್ರ ಸಲ್ಲಿಸಿ ಪ್ರಚಾರ ಕಾರ್ಯ ಕೈಗೊಂಡಿರುವ ಅವರು ಮಂಗಳೂರಿಗೆ ತೆರಳುವ ದಾರಿಮಧ್ಯೆ ಸುಳ್ಯದಲ್ಲಿ ಸುದ್ದಿಯೊಂದಿಗೆ ಮಾತನಾಡಿದರು. ಸರಕಾರಿ ಮತ್ತು ಖಾಸಗಿ ಶಿಕ್ಷಕರ ವೇತನ ತಾರತಮ್ಯ ನಿವಾರಣೆ ಹಾಗೂ ಸರಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆಯನ್ನು ನೀಗಿಸಲು ಪ್ರಯತ್ನಿಸುವುದಾಗಿ ಹೇಳಿದರು.
ಡಾ.ನರೇಶ್ಚಂದ್ ಹೆಗ್ಡೆಯವರು ಮೂಲತಃ ಉಡುಪಿಯ ಹೆಬ್ರಿಬೀಡಿನವರು. ಪ್ರಸ್ತುತ ಮಂಗಳೂರು ದೇರಳಕಟ್ಟೆಯ ಕೆ.ಎಸ್.ಹೆಗ್ಡೆ ಮೆಡಿಕಲ್ ಕಾಲೇಜಿನಲ್ಲಿ ಪ್ರಾಧ್ಯಾಪಕ ಹಾಗೂ ಹೃದ್ರೋಗ ತಜ್ಞರಾಗಿ ಸೇವೆ ಸಲ್ಲಿಸುತ್ತಿದ್ದಾರೆ.