ಮೇ. 21ರ ಮಂಗಳವಾರದಂದು ಮೆಸ್ಕಾಂ ಸುಳ್ಯ ಉಪವಿಭಾಗ ವ್ಯಾಪ್ತಿಯ 33/11 ಕೆ.ವಿ. ಬೆಳ್ಳಾರೆ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ 11 ಕೆ.ವಿ. ಪೀಡರುಗಳಲ್ಲಿ ತುರ್ತು ನಿಯತಕಾಲಿಕ ನಿರ್ವಹಣಾ ಕೆಲಸವನ್ನು ಹಮ್ಮಿಕೊಂಡಿರುವುದರಿಂದ 11ಕೆವಿ ಬೆಳ್ಳಾರೆ-1, ಬೆಳ್ಳಾರೆ -2 ನೆಟ್ಟಾರು, ಕಳಂಜ, ಮುರುಳ್ಳ, ಪೆರ್ಲಂಪಾಡಿ, ಚೊಕ್ಕಾಡಿ ಫೀಡರುಗಳಲ್ಲಿ ಬೆಳಿಗ್ಗೆ 10:00 ರಿಂದ ಸಾಯಂಕಾಲ 6:00 ರ ತನಕ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು ಗ್ರಾಹಕರು ಸಹಕರಿಸಬೇಕಾಗಿ ಮೆಸ್ಕಾಂ ಅಧಿಕಾರಿಗಳು ತಿಳಿಸಿದ್ದಾರೆ.