ಸುಳ್ಯ ನಗರ ವ್ಯಾಪ್ತಿಯ ವಿವಿಧ ಪ್ರದೇಶಗಳಲ್ಲಿ ಚರಂಡಿ ವ್ಯವಸ್ಥೆ ಇಲ್ಲದೆ ಮಳೆನೀರು ರಸ್ತೆ ನಡುವಿನಲ್ಲಿ ಹರಿಯುತ್ತಿದೆ.
ಸುಳ್ಯ ಜೂನಿಯರ್ ಕಾಲೇಜ್ ರಸ್ತೆ, ಕುರುಂಜಿಭಾಗ್, ಹಳೆಗೇಟು, ಗಾಂಧಿನಗರ ಮುಂತಾದ ಕಡೆಗಳಲ್ಲಿ ಇದೇ ದೃಶ್ಯ ಕಂಡು ಬರುತ್ತಿದೆ. ಮಳೆಗಾಲ ಆರಂಭಕ್ಕೂ ಮುನ್ನ ಸಂಬಂಧಪಟ್ಟ ಇಲಾಖೆಯವರು ರಸ್ತೆ ಬದಿಯಲ್ಲಿ ಚರಂಡಿಗಳ ವ್ಯವಸ್ಥೆಯನ್ನು ಮಾಡದೆ ಇರುವುದೇ ಈ ಸಮಸ್ಯೆಗಳಿಗೆ ಕಾರಣ ಎಂದು ಸಾರ್ವಜನಿಕರು ಹೇಳಿಕೊಳ್ಳುತ್ತಿದ್ದಾರೆ.