ಗೂನಡ್ಕ ತೆಕ್ಕಿಲ್ ಆಂಗ್ಲ ಮಾಧ್ಯಮ ಶಾಲೆಗೆ ಮೀಫ್ ಎಕ್ಸಲೆನ್ಸ್ ಅವಾರ್ಡ್ ಪ್ರದಾನ

0

ಮುಸ್ಲಿಂ ಶಿಕ್ಷಣ ಸಂಸ್ಥೆಗಳ ಒಕ್ಕೂಟ (ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ) ಇದರ ಆಶ್ರಯದಲ್ಲಿ ನಡೆದ ಮೀಫ್ ಆನುವೇಲ್ ಮೀಟ್ ಮತ್ತು ಎಕ್ಸಲೆನ್ಸ್ ಅವಾರ್ಡ್ -2024 ಪ್ರದಾನ ಸಮಾರಂಭದಲ್ಲಿ ಸುಳ್ಯದ ಗೂನಡ್ಕ ತೆಕ್ಕಿಲ್ ಆಂಗ್ಲ ಮಾಧ್ಯಮ ಶಾಲೆಗೆ ಅವಾರ್ಡ್ ಪ್ರಧಾನ ನಡೆಯಿತು.ಕಾರ್ಯಕ್ರಮದ ಉದ್ಘಾಟಕರಾಗಿ ಆಗಮಿಸಿದ ಕರ್ನಾಟಕ ವಿಧಾನ ಸಭಾಧ್ಯಕ್ಷ ಯು.ಟಿ ಖಾದರ್ ಪ್ರಶಸ್ತಿ ಪ್ರಧಾನವನ್ನು ಮಾಡಿದರು.


ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯ ಮುಖ್ಯಮಂತ್ರಿಗಳ ಅಧೀನ ಪ್ರಧಾನ ಕಾರ್ಯದರ್ಶಿ ಎಲ್.ಕೆ ಅಥೀಖ್ ( ಹಣಕಾಸು ಇಲಾಖೆ), ಮೀಫ್ ನ ಅಧ್ಯಕ್ಷರಾದ ಮೂಸಬ್ಬ ಪಿ.ಬ್ಯಾರಿ, ಉಪಅಧ್ಯಕ್ಷ ಹಾಜಿ ಮಹಮ್ಮದ್ ಮುಸ್ತಫಾ ಜನತಾ ಸುಳ್ಯ ಮತ್ತು ಇತರ ಗಣ್ಯ ಅಥಿತಿಗಳು ಉಪಸ್ಥಿತರಿದ್ದರು.2023-24 ನೇ ಸಾಲಿನಲ್ಲಿ SSLC ಪರೀಕ್ಷೆಯಲ್ಲಿ ಸತತ 6ನೇ ಬಾರಿಗೆ ಶೇ.100 ಫಲಿತಾಂಶ ಪಡೆದ ಹಿನ್ನೆಲೆಯಲ್ಲಿ ತೆಕ್ಕಿಲ್ ಆಂಗ್ಲ ಮಾಧ್ಯಮ ಶಾಲೆಗೆ ಮೀಫ್ ಎಕ್ಸಲೆನ್ಸ್ ಅವಾರ್ಡ್ ಪ್ರಧಾನ ಮಾಡಲಾಯಿತು. ಈ ಸಂದರ್ಭದಲ್ಲಿ ಶಾಲೆಯ ಆಡಳಿತ ಮಂಡಳಿ ಅಧ್ಯಕ್ಷರಾದ ಟಿ.ಎಮ್ ಶಹೀದ್ ತೆಕ್ಕಿಲ್, ವ್ಯವಸ್ಥಾಪಕರಾದ ಉನೈಸ್ ಪೆರಾಜೆ,ಗೌರವ ಅಧ್ಯಕ್ಷರಾದ ತಾಜ್ ಮಹಮ್ಮದ್, ಮುಖ್ಯ ಶಿಕ್ಷಕರಾದ ಸಂಪತ್ ಜೆ.ಡಿ ಹಾಗೂ ಸಂಸ್ಥೆಯ ಶಿಕ್ಷಕರುಗಳಾದ ಮೆಹೆಖ್ನಾಜ್,ತೌಸೀನಾ ಜಿ, ಸಾಧಿಕ ಕೆ, ಮಿಸಿರಿಯಾ ಭಾಗವಹಿಸಿದ್ದರು.