ಕೆವಿಜಿ ಅಮರಜ್ಯೋತಿ ಪಿ.ಯು. ಕಾಲೇಜಿನ ನೂತನ ವಿದ್ಯಾರ್ಥಿಗಳಿಗೆ ಓರಿಯಂಟೇಶನ್ ಕಾರ್ಯಕ್ರಮ ಮೇ. 27ರಂದು ಸುಳ್ಯದ ಪರಿವಾರಕಾನ ಕುರುಂಜಿ ವೆಂಕಟ್ರಮಣ ಗೌಡ ಸಮುದಾಯಭವನ ಅಮರಶ್ರೀಭಾಗ್ ನಲ್ಲಿ ನಡೆಯಿತು.
ಕಾಲೇಜಿನ ಪ್ರಾಂಶುಪಾಲೆ ಡಾ. ಯಶೋಧ ರಾಮಚಂದ್ರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಸಿಇಒ ಡಾ. ಉಜ್ವಲ್ ಯು.ಜೆ. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡುತ್ತಾ ‘ಸಂಸ್ಥೆಯ ಧ್ಯೇಯೋದ್ದೇಶಗಳನ್ನು ವಿವರಿಸುತ್ತಾ ನಮ್ಮ ಸಂಸ್ಥೆಯ ವಿದ್ಯಾರ್ಥಿಗಳನ್ನು ಪ್ರೊಫೆಷನಲ್ ಕಾಲೇಜಿಗೆ ಸೇರುವ ಮಟ್ಟಕ್ಕೆ ತಯಾರಿಸುವುದು ನಮ್ಮ ಗುರಿ. ಶೈಕ್ಷಣಿಕ ವರ್ಷದಲ್ಲಿ ವಿದ್ಯಾರ್ಥಿಗಳು ಯಾವ ವಿಷಯಗಳಲ್ಲಿ ಹೆಚ್ಚು ಆಸಕ್ತಿ ತೋರಿಸುತ್ತಾರೋ ಅದನ್ನು ಪೋಷಕರಿಗೆ ಮನವರಿಕೆ ಮಾಡಿ ಪೋಷಕರಿಗೆ ತಿಳಿಸಿ ವಿದ್ಯಾರ್ಥಿಗಳ ಆಸಕ್ತಿಯ ವಿಷಯಗಳ ಬಗ್ಗೆ ಮಾಹಿತಿ ಕೊಡುವ ಕೆಲಸ ಮಾಡುತ್ತೇವೆ. ಎಸ್.ಎಸ್.ಎಲ್.ಸಿ ಯಲ್ಲಿ ಪಡೆದ ಪರ್ಸೆಂಟೇಜಿಗಿಂತ ಹೆಚ್ಚು ಪರ್ಸೇಂಟೇಜ್ ಪಿಯುಸಿಯಲ್ಲಿ ಪಡೆಯವಂತೆ ವಿದ್ಯಾರ್ಥಿಗಳನ್ನು ತಯಾರಿಸುತ್ತೇವೆ ಎಂದರು.
ಕಾಲೇಜಿನ ಪ್ರಾಂಶುಪಾಲೆ ಡಾ. ಯಶೋಧ ರಾಮಚಂದ್ರ ತಮ್ಮ ಅಧ್ಯಕ್ಷೀಯ ಮಾತುಗಳನ್ನಾಡುತ್ತಾ ‘ನಾವು ಬರೇ ವಿದ್ಯಾರ್ಥಿಗಳನ್ನು ಮಾತ್ರ ನಮ್ಮ ಕಾಲೇಜಿಗೆ ಸೇರಿಸುವುದಲ್ಲ, ಪೋಷಕರೂ ಮುಂದಿನ ದಿನಗಳಲ್ಲಿ ನಮ್ಮೊಂದಿಗಿರಬೇಕೆನ್ನುವ ಉದ್ದೇಶದಿಂದ ಈ ಕಾರ್ಯಕ್ರಮಕ್ಕೆ ಪೋಷಕರನ್ನು ಆಮಂತ್ರಿಸಿದ್ದೇವೆ. ನಮ್ಮ ಸಂಸ್ಥೆಯ ಮ್ಯಾನೇಜಿಂಗ್ ಟ್ರಸ್ಟ್ ಡಾ. ರೇಣುಕಾಪ್ರಸಾದ್ ರವರು ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬರೆಯುವಷ್ಟು ತಯಾರಿ ಮಾಡಬೇಕೆನ್ನುವ ಧ್ಯೇಯವನ್ನು ಇಟ್ಟುಕೊಂಡರೆ ನಮ್ಮ ಸಂಸ್ಥೆಯ ಸಿಇಒ ಡಾ. ಉಜ್ವಲ್ ಯು.ಜೆಯವರು ನಮ್ಮ ಸಂಸ್ಥೆಯಲ್ಲಿ ವಿದ್ಯಾಭ್ಯಾಸಕ್ಕೆ ಬೇಕಾದ ಆಧುನಿಕ ಅನುಕೂಲತೆಗಳನ್ನು ಒದಗಿಸಿಕೊಟ್ಟಿದ್ದಾರೆ. ವಿದ್ಯಾರ್ಥಿಗಳು ಸೂಕ್ತ ಮಾರ್ಗದರ್ಶನಗಳನ್ನು ಪಡೆದು ಉತ್ತಮ ಅಂಕಗಳನ್ನು ಪಡೆಯುವುದರೊಂದಿಗೆ ಉತ್ತಮ ಸಂಸ್ಕಾರಗಳೊಂದಿಗೆ ಈ ಶೈಕ್ಷಣಿಕ ಘಟ್ಟವನ್ನು ಯಶಸ್ವಿಯಾಗಿ ಪೂರೈಸಿ ಎಂದರು.
ಕಾಲೇಜಿನ ಉಪಪ್ರಾಂಶುಪಾಲರಾದ ದೀಪಕ್ ವೈ.ಆರ್ ಕಾಲೇಜಿನಲ್ಲಿ ವಿದ್ಯಾರ್ಥಿಗಳು ಪಾಲಿಸಬೇಕಾದ ನಿಯಮಗಳನ್ನು ವಿವರಿಸಿದರು. ಉಪನ್ಯಾಸಕರಾದ ಭವ್ಯ ಸಿ.ಟಿ ಜೆಇಇ, ನೀಟ್ ಮತ್ತು ಸಿಇಟಿ ಪರೀಕ್ಷೆಗಳ ಬಗ್ಗೆ ಮಾಹಿತಿ ನೀಡಿದರು. 2024ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿಗಳನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಉಪನ್ಯಾಸಕಿ ಅರ್ಪಿತಾ ಸನ್ಮಾನಿತರ ಹೆಸರು ವಾಚಿಸಿದರು. ದೀಕ್ಷಿತ್ ಎಂ.ಕೆ ಸಿಎ ಫೌಂಡೇಶನ್ ಮತ್ತು ಟ್ಯಾಲಿ ಬಗ್ಗೆ ಮಾಹಿತಿ ನೀಡಿದರು. ಕೆವಿಜಿ ಅಮರಜ್ಯೋತಿ ವಿದ್ಯಾರ್ಥಿವೇತನವನ್ನು ಈ ಸಂದರ್ಭದಲ್ಲಿ ವಿತರಿಸಲಾಯಿತು. ಮಲ್ಲಿಕಾ ಎಂ.ಎಲ್ ವಿದ್ಯಾರ್ಥಿ ವೇತನ ಪಡೆದ ವಿದ್ಯಾರ್ಥಿಗಳ ಹೆಸರು ವಾಚಿಸಿದರು. ಉಪನ್ಯಾಸಕರಾದ ಕವಿತಾ ಎಂ.ಕೆ ಸ್ವಾಗತಿಸಿ, ರತ್ನಾವತಿ ಬಿ ವಂದಿಸಿದರು. ಉಪನ್ಯಾಸಕಿಯರಾದ ಅಭಿಜ್ಞಾ ಎ ಮತ್ತು ಮಲ್ಲಿಕಾ ಎಂ.ಎಲ್ ಕಾರ್ಯಕ್ರಮ ನಿರೂಪಿಸಿದರು.