ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಸುಳ್ಯ ವಿಧಾನಸಭಾ ಕ್ಷೇತ್ರ ಸಮಿತಿಯ ಕಾರ್ಯಕರ್ತರ ಸಮಾವೇಶವು ಸವಣೂರು ಗ್ರಾಮ ಸಮಿತಿ ವತಿಯಿಂದ ಸವಣೂರಿನ ಅಂಬೇಡ್ಕರ್ ಭವನದಲ್ಲಿ ಸಂಜೆ 4 ಗಂಟೆಗೆ ಮತ್ತು ಸುಳ್ಯ ಬ್ಲಾಕ್ ಸಮಿತಿ ವತಿಯಿಂದ ರಾತ್ರಿ 7 ಗಂಟೆಗೆ ಗಾಂಧಿನಗರದಲ್ಲಿ ಕ್ಷೇತ್ರ ಸಮಿತಿಯ ಅಧ್ಯಕ್ಷ ಅಬ್ದುಲ್ ರಝಾಕ್ ಕೆನರಾ ರವರ ಅಧ್ಯಕ್ಷತೆಯಲ್ಲಿ ನಡೆಯಿತು.
ಸಮಾವೇಶದಲ್ಲಿ ಅಬ್ದುಲ್ ರಝಾಕ್ ಕೆನರಾ ಪ್ರಾಸ್ತಾವಿಕ ಮಾತುಗಳನ್ನಾಡಿದರು, ವಿಷಯ ಮಂಡನೆ ಮಾಡಿದ ರಾಜ್ಯ ಸಮಿತಿ ಸದಸ್ಯ ಅಕ್ಬರ್ ಅಲಿ ಪೊನ್ನೋಡಿ ಮಾತನಾಡಿ ಬೂತ್ ಮಟ್ಟದಿಂದ ಪಕ್ಷವನ್ನು ಸಂಘಟಿಸುವ ಬಗ್ಗೆ ಸವಿಸ್ತಾರವಾಗಿ ವಿವರಿಸಿ ಮುಂಬರುವ ಜಿಲ್ಲಾ ಪಂಚಾಯತಿ ಮತ್ತು ತಾಲ್ಲೂಕು ಪಂಚಾಯತ್ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ಸಲಹೆ ಸೂಚನೆಗಳನ್ನು ನೀಡಿ ಚುನಾವಣೆಗೆ ಸಜ್ಜಾಗುವಂತೆ ಕಾರ್ಯಕರ್ತರಿಗೆ ಕರೆ ನೀಡಿದರು.
ಹಾಗೂ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪಕ್ಷ ತೆಗೆದುಕೊಂಡ ನಿಲುವಿನಿಂದ ಯಾವ ರೀತಿ ಪರಿಣಾಮ ಬೀರಿದೆ ಹಾಗೂ ಲೋಕಸಭಾ ಚುನಾವಣೆಯಲ್ಲಿ ಯಾವ ರೀತಿ ಪರಿಣಾಮ ಬೀರಲಿದೆ ಎಂಬ ಬಗ್ಗೆ ಮಾಹಿತಿ ನೀಡಿದರು.
ಸಮಾರೋಪ ಭಾಷಣವನ್ನು ಎಸ್‌ಡಿಪಿಐ ದ.ಕ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಮಾಲ್ ಜೋಕಟ್ಟೆ ನೆರವೇರಿಸಿ ಮಾತನಾಡಿದರು.
ಸವಣೂರಿನ ಕಾರ್ಯಕ್ರಮದಲ್ಲಿ ಕ್ಷೇತ್ರ ಸಮಿತಿಯ ಕಾರ್ಯದರ್ಶಿ ಶರೀಫ್ ನಿಂತಿಕಲ್ ಸ್ವಾಗತಿಸಿ, ಕೋಶಾಧಿಕಾರಿ ಅಬ್ದುಲ್ ರಹಿಮಾನ್ ತಂಬಿನಮಕ್ಕಿ ಬೆಳ್ಳಾರೆ ಧನ್ಯವಾದ ಅರ್ಪಿಸಿದರು.
ಸುಳ್ಯದ ಕಾರ್ಯಕ್ರಮದಲ್ಲಿ ಬ್ಲಾಕ್ ಅಧ್ಯಕ್ಷ ಮೀರಝ್ ಸುಳ್ಯ ಸ್ವಾಗತಿಸಿದರು.
ವೇದಿಕೆಯಲ್ಲಿ ಎಸ್‌ಡಿಪಿಐ ಸುಳ್ಯ ವಿಧಾನಸಭಾ ಕ್ಷೇತ್ರ ಸಮಿತಿ ಉಪಾಧ್ಯಕ್ಷ ಬಾಬು ಎನ್ ಸವಣೂರು,ಪಕ್ಷ ಸಂಘಟನಾ ಕಾರ್ಯದರ್ಶಿ ಸಿದ್ದೀಕ್ ಸವಣೂರು ,ಸವಣೂರು ಗ್ರಾಮ ಸಮಿತಿ ಅಧ್ಯಕ್ಷರಾದ ಹನೀಫ್ ಅತ್ತಿಕ್ಕೆರೆ ಹಾಗೂ ಕಾರ್ಯದರ್ಶಿ ರಫೀಕ್ ಪಣೆಮಜಲು ಉಪಸ್ಥಿತರಿದ್ದರು.