ಜೂ.5 ಕ್ಕೆ ಜೋಸೆಫ್ ವಿದ್ಯಾಸಂಸ್ಥೆಯಲ್ಲಿ ಬೀಳ್ಕೊಡುಗೆ
ಸುಳ್ಯ ಸೈಂಟ್ ಜೋಸೆಫ್ ಶಾಲೆಯಲ್ಲಿ ಕಳೆದ 17 ವರ್ಷಗಳಿಂದ ಮುಖ್ಯ ಶಿಕ್ಷಕಿಯಾಗಿ ಸೇವೆ ಸಲ್ಲಿಸಿದ್ದ
ಸಿಸ್ಟರ್ ಬಿನೋಮರವರು ಆಂದ್ರಪ್ರದೇಶದ ಗುಂಟೂರು ಜಿಲ್ಲೆಗೆ ವರ್ಗಾವಣೆಗೊಂಡಿದ್ದಾರೆ.
ಕೇರಳದ ಕೊಟ್ಟಾಯಂ ಜಿಲ್ಲೆಯ ಮಣಿಮಾಲಾದಲ್ಲಿ ಮಾರ್ಚ್ 8 1974 ರಂದು ಚಾಕೋಫಿಲಿಪೊಸ್ ಮತ್ತು ಥೆರೆಸಾ ದಂಪತಿಗಳ ಪುತ್ರಿಯಾಗಿ ಜನಿಸಿದ ಇವರು ತನ್ನ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣವನ್ನು ಸೈಂಟ್ ತೆರೇಸಾ ಶಾಲೆ ಮಣಿಮಾಲಾದಲ್ಲಿ, ಪಿಯುಸಿ ಮತ್ತು ಪದವಿ ಶಿಕ್ಷಣವನ್ನು ಬೆಂಗಳೂರಿನ ಕ್ರೈಸ್ಟ್ ಕಾಲೇಜಿನಲ್ಲಿ ಪೂರೈಸಿದ್ದರು.
ಬೆಂಗಳೂರಿನ ವಿಜಯ ಕಾಲೇಜಿನಲ್ಲಿ ಬಿಎಡ್ ಹಾಗೂ ಮೈಸೂರಿನಲ್ಲಿ ಎಂಎ ಸ್ನಾತಕೋತ್ತರ ಪದವಿ ಪೂರೈಸಿದ ಬಳಿಕ 1993ರಲ್ಲಿ ಕೇರಳದಲ್ಲಿ ಶಿಕ್ಷಕ ವೃತ್ತಿಗೆ ಪಾದಾರ್ಪಣೆ ಮಾಡಿದ್ದರು.
ಬಳಿಕ ಆಂಧ್ರಪ್ರದೇಶದಲ್ಲಿ ಕೆಲ ವರ್ಷ ಸೇವೆ ಸಲ್ಲಿಸಿ 2007 ರಲ್ಲಿ ಸುಳ್ಯದ ಸಂತ ಜೋಸೆಫ್ ಆಂಗ್ಲ ಮಾಧ್ಯಮ ಶಿಕ್ಷಣ ಸಂಸ್ಥೆಗೆ ಮುಖ್ಯ ಶಿಕ್ಷಕಿಯಾಗಿ ಪದೋನ್ನತಿ ಹೊಂದಿ ಬಂದಿದ್ದರು.
ಇಲ್ಲಿ ಸುದೀರ್ಘ 17 ವರ್ಷ ಮುಖ್ಯ ಶಿಕ್ಷಕಿಯಾಗಿ ಶಾಲಾ ಅಭಿವೃದ್ಧಿಯಲ್ಲಿ, ಎಸ್ಎಸ್ಎಲ್ ಸಿ ಯಲ್ಲಿ ಹಲವು ವರ್ಷಗಳಲ್ಲಿ ಶೇಕಡ 100 ಬರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.
ಜೂನ್ 5 ರಂದು ಬೀಳ್ಕೊಡುಗೆ
ಜೂ.5 ರಂದು ಸೈಂಟ್ ಜೋಸೆಫ್ ವಿದ್ಯಾಸಂಸ್ಥೆಯಲ್ಲಿ ಬೀಳ್ಕೊಡುಗೆ ಸಮಾರಂಭ ಸೈಂಟ್ ಜೋಸೆಫ್ ಸಭಾಂಗಣದಲ್ಲಿ ನಡೆಯಲಿದೆ ಎಂದು ಸೈಂಟ್ ಜೊಸೆಫ್ ವಿದ್ಯಾಸಂಸ್ಥೆ ಸಂಚಾಲಕ, ಸೈಂಟ್ ಬ್ರಿಜಿಡ್ಸ್ ಚರ್ಚ್ ಧರ್ಮ ಗುರುಗಳಾದ ರೆ.ಪಾ ವಿಕ್ಟರ್ ಡಿಸೋಜ ರವರು ತಿಳಿಸಿದ್ದಾರೆ.