ಸ್ನೇಹ ಶಿಕ್ಷಣ ಸಂಸ್ಥೆಯಲ್ಲಿ ಶಾಲಾ ಪ್ರಾರಂಭೋತ್ಸವ

0

ಸುಳ್ಯದ ಸ್ನೇಹ ಶಿಕ್ಷಣ ಸಂಸ್ಥೆಯಲ್ಲಿ ಹೊಸತಾಗಿ ಶಾಲೆಗೆ ಸೇರಿದ ವಿದ್ಯಾರ್ಥಿಗಳನ್ನು ಈಗಾಗಲೇ ಕಲಿಯುತ್ತಿರುವ ವಿದ್ಯಾರ್ಥಿಗಳು ಸ್ವಾಗತಿಸುವ ವಿಶಿಷ್ಟವಾದ ಕಾರ್ಯಕ್ರಮದೊಂದಿಗೆ ಶಾಲಾ ಆರಂಭೋತ್ಸವವು ಮೇ. 31 ರಂದು ನಡೆಯಿತು.


ಶಾಲಾ ಮುಖ್ಯೋಪಾಧ್ಯಾಯರು ಮತ್ತು ಶಿಕ್ಷಕರು ವಿದ್ಯಾರ್ಥಿಗಳಿಗೆ ಆರತಿ ಬೆಳಗಿ ಹಣೆಗೆ ಕುಂಕುಮ ಹಚ್ಚಿ ಸ್ವಾಗತಿಸಿದರು.
ಬ್ಯಾಂಡ್ ವಾದನದೊಂದಿಗೆ ಸೂರ್ಯಾಲಯದಲ್ಲಿ ಪ್ರದಕ್ಷಿಣೆ ಮಾಡಿ, ಗಾಯತ್ರಿ ಮಂತ್ರ, ಸೂರ್ಯಾಷ್ಟಕ ಮತ್ತಿತರ ಮಂತ್ರಗಳನ್ನು ಪಠಿಸುವುದರ ಮೂಲಕ ಹೊಸ ಶೈಕ್ಷಣಿಕ ವರ್ಷದ ಚಟುವಟಿಕೆಗಳನ್ನು ಆರಂಭಿಸಲಾಯಿತು.


ಈ ಸಂದರ್ಭದಲ್ಲಿ ಸ್ನೇಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ. ಚಂದ್ರಶೇಖರ ದಾಮ್ಲೆಯವರು ಹೊಸದಾಗಿ ಸೇರ್ಪಡೆಯಾದ ಮಕ್ಕಳಿಗೆ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಜಯಲಕ್ಷ್ಮಿ ದಾಮ್ಲೆ, ಶಾಲಾ ಪೋಷಕರಾಗಿರುವ ವಿನಯಕುಮಾರ್ ಕಂದಡ್ಕ, ರಶ್ಮಿ ಎನ್. ಆರ್, ರಾಧಾಕೃಷ್ಣ ಉಬರಡ್ಕ, ಯತೀಶ್ ಬಡ್ಡಡ್ಕ ಹಾಗೂ ಶಾಲಾ ಶಿಕ್ಷಕರು ಉಪಸ್ಥಿತರಿದ್ದರು.