ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನಲ್ಲಿ ಪದವಿಪ್ರದಾನ ಸಮಾರಂಭ ಮೇ. 31ರಂದು ನಡೆಯಿತು. ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಕಮಿಟಿ ಬಿ ಅಧ್ಯಕ್ಷ ಡಾ. ರೇಣುಕಾಪ್ರಸಾದ್ ಕೆ.ವಿ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.
ವಿಟಿಯು ರಿಜಿಸ್ಟ್ರಾರ್ (ಮೌಲ್ಯ ಮಾಪನ) ಡಾ. ಟಿ.ಎನ್. ಶ್ರೀನಿವಾಸ್ ಮುಖ್ಯ ಅತಿಥಿಯಾಗಿ ಭಾಗವಹಿಸಿ ‘ಪೋಷಕರು, ಆಡಳಿತ ಮಂಡಳಿ ಮತ್ತು ಉಪನ್ಯಾಸಕರು ಮಾಡಿದ ತ್ಯಾಗದ ಫಲವಾಗಿ ನೀವಿವತ್ತು ಇಂಜಿನಿಯರ್ಸ್ ಆಗಿದ್ದೀರಿ. ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ನ ಸ್ಥಾಪಕಾಧ್ಯಕ್ಷ ಡಾ. ಕುರುಂಜಿ ವೆಂಕಟ್ರಮಣ ಗೌಡರ ಮಹತ್ವಾಕಾಂಕ್ಷೆಯ ಫಲವಾಗಿ ಇವತ್ತು ಸುಳ್ಯದಂತ ಗ್ರಾಮೀಣ ಪ್ರದೇಶದಲ್ಲಿ ಸಂಸ್ಥೆಗಳನ್ನು ಸ್ಥಾಪಿಸಿದ್ದಾರೆ. ಡಾ. ರೇಣುಕಾಪ್ರಸಾದ್ ಕೆ.ವಿ. ಉತ್ತಮ ರೀತಿಯಲ್ಲಿ ಮಾರ್ಗದರ್ಶನ ನೀಡುತ್ತಿದ್ದಾರೆ. ಸಂಸ್ಥೆಯ ಸಿಇಒ ಡಾ. ಉಜ್ವಲ್ ಯುಜೆ ಸಮಾಜದಲ್ಲಿ ಮತ್ತು ವಿಟಿಯು ಜೊತೆ ಒಳ್ಳೆಯ ಸಂಬಂಧ ಇಟ್ಟುಕೊಂಡಿದ್ದಾರೆ.
ವಿದ್ಯಾರ್ಥಿಗಳೇ ನಿಮ್ಮಲ್ಲಿ ಯಾವುದೇ ಕೀಳರಿಮೆ ಬೇಡ. ಜೀವನದಲ್ಲಿ ಶಿಸ್ತು, ಸಂಯಮಗಳನ್ನು ಬೆಳೆಸಿಕೊಳ್ಳಿ. ನಿರ್ಧಿಷ್ಟ ಗುರಿಯನ್ನು ಇಟ್ಟುಕೊಂಡು ಮುನ್ನಡೆಯಿರಿ. ಆ ಮೂಲಕ ಯಶಸ್ಸನ್ನು ಗಳಿಸಿ’ ಎಂದರು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಡಾ. ರೇಣುಕಾಪ್ರಸಾದ್ ಕೆ.ವಿ. ಮಾತನಾಡುತ್ತಾ ‘ವಿದ್ಯಾರ್ಥಿಗಳಾದ ನೀವು ಇವತ್ತು ತಮ್ಮ ಜೀವನದ ಮಹತ್ವದ ಘಟ್ಟಕ್ಕೆ ತಲುಪಿದ್ದೀರಿ. ಹೆಚ್ಚು ಪರಿಶ್ರಮ ಪಟ್ಟರೆ ಇನ್ನಷ್ಟು ಸಾಧನೆಯನ್ನು ಮಾಡಲು ಸಾಧ್ಯ. ಆ ಮೂಲಕ ನಿರ್ಧಿಷ್ಟ ಗುರಿ ತಲುಪಬಹುದು. ದೇಶದ ಪ್ರಗತಿಗೆ, ಬೆಳವಣಿಗೆಗೆ ನಿಮ್ಮ ಕೊಡುಗೆ ನೀಡಿ. ನಿಮ್ಮನ್ನು ಈ ಮಟ್ಟಕ್ಕೆ ಬೆಳೆಸಿದ ಪೋಷಕರು, ಶಿಕ್ಷಕರು ಮತ್ತು ಸಂಸ್ಥೆಯನ್ನೂ ಯಾವತ್ತೂ ಮರೆಯಬೇಡಿ. ಇಷ್ಟು ಸಮಯ ನಿಮ್ಮನ್ನು ಸಲಹಿದ ನಿಮ್ಮ ಪೋಷಕರನ್ನು ಇನ್ನು ನೀವು ಸಲಹಬೇಕು’ ಎಂದರು.
ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಕಮಿಟಿ ಬಿ ಕಾರ್ಯದರ್ಶಿ ಡಾ. ಜ್ಯೋತಿ ಆರ್. ಪ್ರಸಾದ್, ವಿಟಿಯು ಗವರ್ನಿಂಗ್ ಕೌನ್ಸಿಲ್ ಮೆಂಬರ್, ಕಾಲೇಜಿನ ಸಿಇಒ, ಕಂಪ್ಯೂಟರ್ ಸೈನ್ಸ್ ವಿಭಾಗ ಮುಖ್ಯಸ್ಥ ಡಾ. ಉಜ್ವಲ್ ಯು.ಜೆ, ವಿಟಿಯು ಮಂಗಳೂರು ವಲಯದ ವಿಶೇಷಾಧಿಕಾರಿ ಡಾ. ಶಿವಕುಮಾರ್ ಹೆಚ್.ಆರ್, ಬೆಂಗಳೂರು ಬಿ.ಎಂ.ಎಸ್. ಕಾಲೇಜಿನ ಕಂಪ್ಯೂಟರ್ ಸೈನ್ಸ್ ವಿಭಾಗದ ಮುಖ್ಯಸ್ಥರಾದ ತಿಪ್ಪೇಸ್ವಾಮಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ವೇದಿಕೆಯಲ್ಲಿ ಉಪಸ್ಥಿತರಿದ್ದ ಕಾಲೇಜಿನ ಸಿವಿಲ್ ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥರಾದ ಡಾ. ಚಂದ್ರಶೇಖರ್, ಇ&ಸಿ ವಿಭಾಗ ಮುಖ್ಯಸ್ಥರಾದ ಡಾ. ಕುಸುಮಾಧರ್, ಕಾಲೇಜಿನ ಡೀನ್ ಆಫ್ ಅಡ್ಮಿಷನ್ ಬಾಲಪ್ರದೀಪ್, ಎಂ.ಬಿ.ಎ. ವಿಭಾಗ ಮುಖ್ಯಸ್ಥರಾದ ಪ್ರೊ. ಕೃಷ್ಣಾನಂದ ಪದವಿ ಪಡೆದ ವಿದ್ಯಾರ್ಥಿಗಳ ಪಟ್ಟಿ ವಾಚಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ಸುರೇಶ್ ಗ್ರಾಜ್ಯುವೇಶನ್ ಡಿಕ್ಲರೇಶನ್ ಮಾಡಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾದ ಡಾ. ಉಮಾಶಂಕರ್ ವಿದ್ಯಾರ್ಥಿಗಳಿಗೆ ಪ್ರಮಾಣವಚನ ಬೋಧಿಸಿದರು. ಡೀನ್ ರಿಸರ್ಚ್ ಮತ್ತು ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥೆ ಡಾ. ಸವಿತಾ ಸಿ.ಕೆ. ಮುಖ್ಯ ಅತಿಥಿಯವರನ್ನು ಪರಿಚಯಿಸಿದರು.
ಕೆ.ವಿ.ಜಿ. ಗವರ್ನಿಂಗ್ ಕೌನ್ಸಿಲ್ ಮೆಂಬರ್ ನಿತ್ಯಾನಂದ ಮುಂಡೋಡಿ, ಕೆ.ವಿ.ಜಿ. ಅಮರಜ್ಯೋತಿ ಪಿ.ಯು. ಕಾಲೇಜು ಪ್ರಾಂಶುಪಾಲೆ ಡಾ. ಯಶೋಧ ರಾಮಚಂದ್ರ, ಕೆ.ವಿ.ಜಿ. ಐಟಿಐ ಪ್ರಾಂಶುಪಾಲ ಚಿದಾನಂದ ಗೌಡ ಸೇರಿದಂತೆ ವಿವಿಧ ಸಂಸ್ಥೆಗಳ ಪ್ರಾಂಶುಪಾಲರು, ಆಡಳಿತಾಧಿಕಾರಿಗಳು, ಕೆವಿಜಿ ಇಂಜಿನಿಯರಿಂಗ್ ಕಾಲೇಜಿನ ಆಡಳಿತಾಧಿಕಾರಿ ನಾಗೇಶ್ ಕೊಚ್ಚಿ ಮತ್ತು ಎಲ್ಲಾ ವಿಭಾಗಗಳ ಮುಖ್ಯಸ್ಥರು, ಸಿಬ್ಬಂದಿಗಳು ಸಮಾರಂಭದಲ್ಲಿ ಉಪಸ್ಥಿತರಿದ್ದರು.
ಡಾ. ಉಜ್ವಲ್ ಯು.ಜೆ. ಸ್ವಾಗತಿಸಿ ಕಾಲೇಜಿನ ಉಪಪ್ರಾಂಶುಪಾಲ ಮತ್ತು ವಿಭಾಗ ಮುಖ್ಯಸ್ಥರೂ, ಪದವಿ ಪ್ರದಾನ ಸಮಾರಂಭದ ಸಂಯೋಜಕರಾದ ಡಾ. ಶ್ರೀಧರ್ ವಂದಿಸಿದರು. ಪ್ರೊಫೆಸರ್ ಕೃಷ್ಣರಾಜ್ ಮತ್ತು ತಂಡ ಆರಂಭದಲ್ಲಿ ನಾಡಗೀತೆಯನ್ನು ಹಾಡಿ ಕೊನೆಯಲ್ಲಿ ರಾಷ್ಟ ಗೀತೆ ಹಾಡಿದರು. ಪ್ರೊ. ಭವ್ಯ ಪಿ.ಎಸ್. ಮತ್ತು ಪ್ರೊ. ಅಶ್ವಿಜ ಕೆ.ಸಿ ಕಾರ್ಯಕ್ರಮ ನಿರೂಪಿಸಿದರು.