ಬೆಳ್ಳಾರೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಪ್ರಾಥಮಿಕ ವಿಭಾಗದ ಶಾಲಾ ಪ್ರಾರಂಭೋತ್ಸವ

0

ವಿದ್ಯಾರ್ಥಿಗಳಿಗೆ ಆರತಿ ಬೆಳಗಿ, ಸಿಹಿ ಹಂಚಿ,ಬ್ಯಾಂಡ್ ವಾಲಗದ ಮೆರವಣಿಗೆಯೊಂದಿಗೆ ಸ್ವಾಗತ

ಬೆಳ್ಳಾರೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಪ್ರಾಥಮಿಕ ವಿಭಾಗದಲ್ಲಿ 2024-25 ನೇ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವವು, ಮೇ.31 ರಂದು ನಡೆಯಿತು. ಹೊಸದಾಗಿ ದಾಖಲಾತಿಗೊಂಡ ವಿದ್ಯಾರ್ಥಿಗಳಿಗೆ ಆರತಿ ಬೆಳಗಿ, ಸಿಹಿ ಹಂಚಿ, ತಳಿರು ತೋರಣ ಬಣ್ಣ ಬಣ್ಣದ ಬಲೂನ್ಗಳಿಂದ ಶೃಂಗಾರಗೊಂಡ ತರಗತಿಗೆ ಬ್ಯಾಂಡ್ ವಾಲಗದ ಮೆರವಣಿಗೆಯೊಂದಿಗೆ ಸ್ವಾಗತ ಮಾಡಲಾಯಿತು.

ಕೆಪಿಎಸ್ ಬೆಳ್ಳಾರೆಯ ಪ್ರಾಂಶುಪಾಲರಾದ ಜನಾರ್ದನ. ಎ, ಉಪ ಪ್ರಾಂಶುಪಾಲರಾದ ಉಮಾ ಕುಮಾರಿ , ಪದವೀಧರೇತರ ಮುಖ್ಯೋಪಾಧ್ಯಾಯರಾದ ಮಾಯಿಲಪ್ಪ ಜಿ., ಶಾಲಾ ಕಟ್ಟಡ ಸ್ಥಾಯಿ ಸಮಿತಿ ಅಧ್ಯಕ್ಷರಾದ ಹರ್ಷ ಜೋಗಿಬೆಟ್ಟು, ಎಸ್ಡಿಎಂಸಿ ಸದಸ್ಯರಾದ ಮುರಳಿ, ಪಾರ್ವತಿ, ನಸೀಮ, ವಸಂತ ಉಲ್ಲಾಸ್ ಉಪಸ್ಥಿತರಿದ್ದರು. ಹೆಚ್ಚಿನ ಸಂಖ್ಯೆಯಲ್ಲಿ ಪೋಷಕರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದರು. ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ ಮತ್ತು ಸಮವಸ್ತ್ರ ವಿತರಣೆಯನ್ನು ಮಾಡಿದ ಗಣ್ಯರು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ಪ್ರಾಥಮಿಕ ವಿಭಾಗದ ಮುಖ್ಯಗುರುಗಳಾದ ಮಾಯಿಲಪ್ಪ ಜಿ ಪ್ರಾಸ್ತಾವಿಕವಾಗಿ ಮಾತನಾಡಿ ವಿದ್ಯಾರ್ಥಿಗಳನ್ನು ಅತಿಥಿಗಳನ್ನು ಸ್ವಾಗತಿಸಿದರು. ಶಿಕ್ಷಕ ದಿನೇಶ ಗೌಡ ಕೆ ಕಾರ್ಯಕ್ರಮ ನಿರೂಪಿಸಿದರು. ಶಾಲಾ ಅಧ್ಯಾಪಕವೃಂದ, ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಸಹಕರಿಸಿದರು.