ಅರಂತೋಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಪ್ರಾರಂಭೋತ್ಸವ

0

ಅರಂತೋಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪ್ರಾರಂಭೋತ್ಸವ ಮೇ.31 ರಂದು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.

ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ ಡಿ ಎಂ ಸಿ ಅಧ್ಯಕ್ಷ ಸುರೇಶ್ ಯು ಕೆ ಉಳುವಾರು ವಹಿಸಿದರು .ಶಾಲೆಯಲ್ಲಿ ನಡೆದ ಸಭಾ ಕಾರ್ಯಕ್ರಮವನ್ನು ಶಾಲೆಯ ಹಳೆ ವಿದ್ಯಾರ್ಥಿ ಮೋಹನ್ ಕುಮಾರ್ ಚೋಡಿಪಣೆ ದೀಪ ಬೆಳಗಿಸಿ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷ ಅಮೀರ್ ಕುಕ್ಕುಂಬಳ, ಜಯಂತಿ , ಶಾಲಾ ಶಿಕ್ಷಕಿ ಸರಸ್ವತಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಶಾಲಾ ವಿದ್ಯಾರ್ಥಿ ಗಳಿಗೆ ಸಮವಸ್ತ್ರ ವನ್ನು ವಿತರಿಸಲಾಯಿತು ಶಾಲೆಯ ವಿದ್ಯಾರ್ಥಿನಿಯರು ಪ್ರಾರ್ಥಿಸಿದರು.ಶಾಲಾ ಮುಖ್ಯೋಪಾಧ್ಯಾಯ ಗೋಪಾಲ ಕೃಷ್ಣ ಬನ ಸ್ವಾಗತಿಸಿದರು. ಶಿಕ್ಷಕಿ ಭಾನುಮತಿ ಯವರು ಕಾರ್ಯಕ್ರಮ ನಿರೂಪಿಸಿದರು .